ನವದೆಹಲಿ: ಭಾರತೀಯ ಜನತಾ ಪಕ್ಷವು (ಬಿಜೆಪಿ) ಅನಿಲ್ ಆಂಟನಿ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಅನಿಲ್ ಆಂಟನಿ ಅವರನ್ನು ಪಕ್ಷದ ನೂತನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಅನಿಲ್ ಆಂಟನಿ ಸದ್ಯ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು.


ಅನಿಲ್ ಅವರು ಹಿರಿಯ ಕಾಂಗ್ರೆಸ್ ನಾಯಕ, ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ. ಕಳೆದ ಕೆಲವು ತಿಂಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.