Wednesday, March 22, 2023
spot_img
- Advertisement -spot_img

ಜೆಡಿಎಸ್​ನ ಭವಾನಿ ರೇವಣ್ಣ ಬಿಜೆಪಿಗೆ ಬಂದರೆ ಹೃದಯಪೂರ್ವಕ ಸ್ವಾಗತ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ಮೈಸೂರು: ಜೆಡಿಎಸ್​ನ ಭವಾನಿ ರೇವಣ್ಣ ಅವರು ಬಿಜೆಪಿಗೆ ಬಂದರೆ ಹೃದಯಪೂರ್ವಕ ಸ್ವಾಗತ , ಯಾರೇ ಬಂದರೂ ಬಿಜೆಪಿಯಲ್ಲಿ ಮುಕ್ತವಾಗಿ ಬೆಳೆಯುವ ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಯಾರ ಮನೆಯನ್ನೂ ಕಾಯಬೇಕಿಲ್ಲ, ಯಾರ ಗೇಟನ್ನು ಕಾಯಬೇಕಿಲ್ಲ, ಬಿಜೆಪಿ ನಾಯಕ ಸಿ.ಟಿ.ರವಿ ಭವಾನಿ ರೇವಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧ ಎಂದಿದ್ದರು. ಈ ಹೇಳಿಕೆಯನ್ನು ಸಮರ್ಥಿಸಿಕೊಂಡು ಅಶ್ವತ್ಥನಾರಾಯಣ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಮನಗರ, ಮಂಡ್ಯ ಜಿಲ್ಲೆಯಲ್ಲಿ ವಿಪಕ್ಷಗಳ ಕ್ಯಾತೆ ಇದ್ದೇ ಇದೆ. ನಮ್ಮದು ಅಭಿವೃದ್ಧಿ ಪರ ಸರ್ಕಾರ, ಅದಕ್ಕೆ ಜನ ಬೆಂಬಲಿಸುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್​ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಜೆಡಿಎಸ್‌ಗೆ ಮತ ನೀಡಿದರೆ ಪ್ರಯೋಜನವಿಲ್ಲ ಎಂದರು.

ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಟಿಕೆಟ್ ಪಡೆಯಲು ಪಟ್ಟು ಹಿಡಿದಿದ್ದಾರೆ. ಆದರೆ ಎಚ್.ಡಿ.ಕುಮಾರಸ್ವಾಮಿ ಭವಾನಿ ಅವರಿಗೆ ಹಾಸನದಲ್ಲಿ ಕೊಡಲ್ಲ ಎಂದು ಹೇಳಿದ್ದಾರೆ. ಭವಾನಿಯವರಿಗೆ ಟಿಕೆಟ್ ಕೊಡ್ತೇವೆ ಎಂದಿದ್ದ ಸಿಟಿ ರವಿ, ಭವಾನಿ ರೇವಣ್ಣರನ್ನು ಬಿಜೆಪಿಗೆ ಆಹ್ವಾನ ಮಾಡಿದ್ದು ತಮಾಷೆಗೆ, ಅದನ್ನೇ ಗಂಭೀರವಾಗಿ ಪರಿಗಣಿಸಬಾರದು ಎಂದಿದ್ದಾರೆ.

Related Articles

- Advertisement -

Latest Articles