ಪಾಟ್ನಾ: ಅಕ್ಟೋಬರ್ 2ರಂದು ಮಹಾತ್ಮಗಾಂಧಿ ಅವರ ಜನ್ಮದಿನದ ಅಂಗವಾಗಿ ವಿರೋಧ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟವು ಇಡೀ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದರು.
ಇನ್ನು ನಿನ್ನೆಯಷ್ಟೇ ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ಮುಕ್ತಾಯವಾಗಿದ್ದು, ಈ ಸಭೆಯಲ್ಲೇ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ನಿತೀಶ್ ಹೇಳಿದರು.
ವಿರೋಧ ಪಕ್ಷಗಳ ಮೈತ್ರಿಕೂಟವು ಸದ್ಯ ಬಿಜೆಪಿಯ ಆಡಳಿತವನ್ನು ನಿದ್ದೆಗೆಡುವಂತೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರವು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ದೂರಿದರು.
ಇದನ್ನೂ ಓದಿ: ಲೋಕಸಭೆಗೆ ಜಂಟಿಯಾಗಿ ಸ್ಪರ್ಧೆ; 13 ಸದಸ್ಯರ ಸಮನ್ವಯ ಸಮಿತಿ ರಚಿಸಿದ ʼಇಂಡಿಯಾʼ
ವಿರೋಧ ಪಕ್ಷಗಳ ಒಗ್ಗಟ್ಟನ್ನು ಕಂಡು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಗಾಬರಿಯಾಗಿದೆ. ಹಾಗಾಗಿ ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ನಿರ್ಧರಿಸಿದೆ. ಆದರೆ, ಇದಕ್ಕೆ ಕಾರಣ ಏನು ಎಂಬುದನ್ನು ಬಹಿರಂಗಪಡಿಸುತ್ತಿಲ್ಲ ಎಂದು ನಿತೀಶ್ ವಾಗ್ದಾಳಿ ನಡೆಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.