ಬಿಹಾರ: ಪಾಟ್ನಾ ವಿಶ್ವವಿದ್ಯಾಲಯದಲ್ಲಿ ಇಂದು ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಆಯತಪ್ಪಿ ಜಾರಿ ಬಿದ್ದಿರುವ ಘಟನೆ ನಡೆದಿದೆ.
ಕಾರ್ಯಕ್ರಮದ ಉದ್ಘಾಟನೆ ವೇಳೆ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಜಾರಿಬಿದ್ದಿದ್ದಾರೆ. ಇನ್ನೂ ಕೂಡಲೇ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿತೀಶ್ ಅವರ ಸಹಾಯಕ್ಕೆ ಧಾವಿಸಿದ್ದು, ನಿತೀಶ್ ಬಳಿಕ ಎದ್ದು ನಿಂತರು.
ಈ ಘಟನೆಯಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಬಳಿಕ ನಿತೀಶ್ ಅವರು ನಗುತ್ತಲೇ ಕಾರ್ಯಕ್ರಮದಲ್ಲಿ ಭಾಗಿಯಾದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ನಿತೀಶ್ ಅವರಿಗೆ ವಯಸಾಯ್ತು ಎಂದು ಸಖತ್ ಟ್ರೋಲ್‌ಗೂ ಗುರಿಯಾಗುತ್ತಿದೆ.


ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.