ನವದೆಹಲಿ: ಇದೇ ಸೆಪ್ಟೆಂಬರ್ 18ರಿಂದ 22ರವರೆಗೆ ನಡೆಯಲಿರುವ ಸಂಸತ್ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನವಾದ ಸೆಪ್ಟೆಂಬರ್ 18ರಂದು ರಾಜ್ಯಸಭೆಯಲ್ಲಿ “ಸಂವಿಧಾನ ಸಭೆಯಿಂದ ಪ್ರಾರಂಭವಾಗುವ 75 ವರ್ಷಗಳ ಸಂಸತ್ತಿನ ಪಯಣ – ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಕಲಿಕೆಗಳು” ಕುರಿತು ಚರ್ಚೆ ಕೂಡ ನಡೆಯಲಿದೆ.
ನಾಲ್ಕು ಮಸೂದೆಗಳ ಚರ್ಚೆ: ವಕೀಲರ (ತಿದ್ದುಪಡಿ) ಮಸೂದೆ, ನಿಯತಕಾಲಿಕೆಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ, ಅಂಚೆ ಕಚೇರಿ ಬಿಲ್, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆಗಳ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.
ಇದನ್ನೂ ಓದಿ: I.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ
ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಚುನಾವಣಾ ಆಯುಕ್ತರ ನೇಮಕಾತಿ ನಿಯಂತ್ರಿಸುವ ಹೊಸ ಮಸೂದೆ ಬಗ್ಗೆ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಯಲಿದ್ದು, ಈ ಮಸೂದೆಯ ಪ್ರಕಾರ ಚುನಾವಣಾ ಆಯುಕ್ತರನ್ನು ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ. ಇದರ ಜೊತೆಗೆ ಈ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ತೆಗೆದು ಹಾಕುವ ಗುರಿ ಹೊಂದಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.