Friday, September 29, 2023
spot_img
- Advertisement -spot_img

ʼಬಿಜೆಪಿ -ಜೆಡಿಎಸ್‌ ಆತಂಕದಿಂದ ಮೈತ್ರಿ ಮಾಡಿಕೊಂಡಿದ್ದಾರೆ ́


ತುಮಕೂರು: ಬಿಜೆಪಿ ಹಾಗೂ ಜೆಡಿಎಸ್‌ನವರು ಆತಂಕದಲ್ಲಿದ್ದಾರೆ, ಕಾಂಗ್ರೆಸ್‌ಗೆ ಜನಪ್ರಿಯತೆ ಇರೋದ್ರಿಂದ ಅವರಿಗೆ ಆತಂಕ ಇದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ – ಜೆಡಿಎಸ್‌ ನವರು ಈ ಆತಂಕದಿಂದ ಮೈತ್ರಿ ಮಾಡಿಕೊಂಡಿದ್ದಾರೆ, ಬಿಜೆಪಿ ಆಡಳಿತದಿಂದ ಜನರ ಜೀವನ ದುಸ್ತರ ಆಗಿದೆ, ಉದ್ಯೋಗ ಕೊಡ್ತೇವೆ ಅಂತಾ ಕೋಟ್ಯಂತರ ಉದ್ಯೋಗ ಕಿತ್ತುಕೊಂಡಿದ್ದಾರೆ, ಬಿಜೆಪಿ ವಿರುದ್ಧ ದುಡಿಯುವ ಜನ ದಂಗೆ ಎದ್ದಿದ್ದಾರೆ, ಈ ಆತಂಕದಿಂದ ಅವರು ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.

ಇದನ್ನು ಓದಿ : Rahul Gandhi : ಯುರೋಪ್ ಸಂಸದರ ಜೊತೆ ರಾಹುಲ್ ಗಾಂಧಿ ದುಂಡು ಮೇಜಿನ ಸಭೆ!

ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ಇದು ನಾಲಾಯಕತನ ಅವರ ಆಂತರಿಕ ಕಚ್ಚಾಟದಿಂದ ಆಯ್ಕೆ ಮಾಡಿಲ್ಲ ಎಂದು ಹರಿಹಾಯ್ದರು. ಇವತ್ತು ತುಮಕೂರು ಜಿಲ್ಲೆಗೆ ಬಂದಿದ್ದೇನೆ, ನಾಡಕಚೇರಿ, ತಾಲ್ಲೂಕು ಕಚೇರಿ ಸಬ್ ರಿಜಿಸ್ಟಾರ್ ಕಚೇರಿ ಪರಿಶೀಲಿಸಿದ್ದೇನೆ, ಜನರ ಸಮಸ್ಯೆ ಆಲಿಸಿದ್ದೇನೆ, ಅಧಿಕಾರಿಗಳ ಕೆಲಸ ಪರಿಶೀಲಿಸಿದ್ದೇನೆ, ಕಂದಾಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಯಿದೆ, ಅಂತಹ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.

ಗುಬ್ಬಿ ತಾಲ್ಲೂಕು ನಕಲಿ ಖಾತೆ ಪ್ರಕರಣದ ವಿಚಾರವಾಗಿ ಮಾತನಾಡಿದ ಅವರು, ಮೂಲಾಜಿಲ್ಲದೆ ಲೋಕಾಯುಕ್ತ ತನಿಖಾ ವರದಿ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles