ಬೆಂಗಳೂರು: ಶಿಗ್ಗಾಂವಿಯಲ್ಲಿ ಬೊಮ್ಮಾಯಿಯರನ್ನೇ ಕಣಕ್ಕಿಳಿಸುವಂತೆ ಮೊದಲ ದಿನದ ಅಭ್ಯರ್ಥಿಗಳ ಆಯ್ಕೆ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ನಿರ್ಧರಿಸಲಾಯಿತು. ಹಾವೇರಿ ಕ್ಷೇತ್ರದ ಶಾಸಕ ನೆಹರು ಓಲೇಕಾರ್ಗೆ ಟಿಕೆಟ್ ಕೊಡದಂತೆ ಅಭಿಪ್ರಾಯ ವ್ಯಕ್ತವಾಗಿದೆ. ಓಲೇಕಾರ್ ನಕಲಿ ಬಿಲ್ ಸೃಷ್ಟಿ ಪ್ರಕರಣದಲ್ಲಿ ಅಪರಾಧಿಯಾಗಿದ್ರಿಂದ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ, ಬೇರೆ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಲು ಒತ್ತಾಯಿಸಲಾಗಿದೆ.
ಅಭ್ಯರ್ಥಿಗಳ ಆಯ್ಕೆ ಅಭಿಪ್ರಾಯ ಸಂಗ್ರಹ ಸಭೆಯ ಫೋಟೋಗಳನ್ನು ಸಿಎಂ ಬೊಮ್ಮಾಯಿಯವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಹಿರೇಕೆರೂರುನಲ್ಲಿ ಬಿ.ಸಿ.ಪಾಟೀಲ್, ಬ್ಯಾಡಗಿ ಕ್ಷೇತ್ರದಲ್ಲಿ ವಿರೂಪಾಕ್ಷಪ್ಪ ಪರ ಒಲವು ವ್ಯಕ್ತವಾಯಿತು.
ರಾಣೆಬೆನ್ನೂರಿನಲ್ಲಿ ಆರ್.ಶಂಕರ್ ಗೆಲುವಿನ ಬಗ್ಗೆ ಅನುಮಾನಿಸಿದ್ದಾರೆ.
ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಾರಿ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರ ತೊರೆದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ನಿಲ್ಲುವ ಇಂಗಿತ ವ್ಯಕ್ತಪಡಿಸಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಅರುಣ್ ಕುಮಾರ್ ಪೂಜಾರ್ ಪರ ಒಮ್ಮತವಿದೆ. ಇನ್ನೂ ಬೆಳಗಾವಿ ನಾಗೇಶ ಮನ್ನೋಳ್ಕರ್ಗೆ ಟಿಕೆಟ್ ಕೊಡುವಂತೆ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸುವ ಹೊಣೆ ನನ್ನದು. ನಾನು ಹೇಳಿದವರಿಗೆ ಟಿಕೆಟ್ ಕೊಡಿ ಅಂತಾ ಮನವಿ ಮಾಡಿದ್ದಾರೆ.