Monday, December 4, 2023
spot_img
- Advertisement -spot_img

B Sriramulu : ʼಐದು ವರ್ಷ ಕಾಂಗ್ರೆಸ್‌ ಅಧಿಕಾರ ನಡೆಸಲಿ ಅಂತಾ ಪ್ರಾರ್ಥಿಸ್ತೇನೆʼ: ಶ್ರೀರಾಮುಲು

ಯಾದಗಿರಿ: ಯಾವುದೇ ಆಪರೇಷನ್ ಕಮಲ ಮಾಡೋದಿಲ್ಲ, ಕಾಂಗ್ರೆಸ್ ಐದು ವರ್ಷ ಅಧಿಕಾರ ಪೂರೈಸಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಕಾಂಗ್ರೆಸ್‌ಗೆ ರಾಜ್ಯದ ಜನ ಸ್ಪಷ್ಟ ಬಹುಮತದ ಸರ್ಕಾರ ಆಯ್ಕೆ ಮಾಡಿದ್ದಾರೆ, 136 ಕಾಂಗ್ರೆಸ್ ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ, ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಐದು ವರ್ಷ ಕಾಂಗ್ರೆಸ್ ಸರಕಾರ ಅಧಿಕಾರ ಪೂರೈಸಲಿ, ನಮ್ಮ ಅಭ್ಯಂತರ ಏನು ಇಲ್ಲ ಎಂದರು.

ಇದನ್ನೂ ಓದಿ; ರಾಜಸ್ಥಾನ: ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ; ಸಿಎಂ ಗೆಹ್ಲೋಟ್ ಖಂಡನೆ

ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡೋದಿಲ್ಲ, ಆಪರೇಷನ್ ಕಮಲದ ಮೂಲಕ ಸರ್ಕಾರ ಕೆಡವುತ್ತಾರೆಂದು ಸುಮ್ಮನೆ ಹೇಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. ಬಿ.ಎಲ್. ಸಂತೋಷ್ 40 ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಸಂತೋಷ್ ಅಂತಹ ಯಾವುದೇ ಮಾತು ಹೇಳಿಲ್ಲ ಅದು ಸುಳ್ಳು ಎಂದು ತಿಳಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles