ಕೊಪ್ಪಳ : ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಹಾಕಿರುವ ಸವಾಲನ್ನು ಕನಕಗಿರಿ ಮಾಜಿ ಶಾಸಕ ಬಸವರಾಜ ದಡೇಸುಗೂರ್ ಸ್ವೀಕರಿಸಿದ್ದಾರೆ.
ಈ ಕುರಿತು ವಿಡಿಯೋ ಮೂಲಕ ಮಾತನಾಡಿದ ಮಾಜಿ ಶಾಸಕ, ಈ ಹಿಂದೆ 17 ಶಾಸಕರನ್ನು ಅಲ್ಲಾಡಿಸಿ ಕರೆದುಕೊಂಡು ಬಂದು ಬಿಜೆಪಿ ಸರ್ಕಾರ ಮಾಡಿದ್ದನ್ನು ಮರೆತಿಲ್ಲ. ಮುಂದಿನ ದಿನಗಳಲ್ಲಿ 45 ಮಂದಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದಕ್ಕೆ ಬಹಳ ದಿನ ಉಳಿದಿಲ್ಲ. ಸ್ವಲ್ಪ ದಿನ ಕಾದು ನೋಡಿ ನಿಮ್ಮ 46 ಜನ ಶಾಸಕರು ಎಲ್ಲಿರುತ್ತಾರೆಂದು ನೀವೇ ನೋಡಬೇಕಾಗುತ್ತದೆ ಎಂದು ಏಕ ವಚನದಲ್ಲಿ ಸಚಿವ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : ಹೊಸಪೇಟೆ ನಗರಸಭೆ ಕಡತ ನಾಪತ್ತೆ ಪ್ರಕರಣ : ಪೌರಾಯುಕ್ತರ ವರದಿಯ ಮೇಲೆ ಕ್ರಮ : ಡಿಸಿ
ಪ್ರಿಯಾಂಕ್ ಖರ್ಗೆ ಏನು ಹೇಳಿದ್ದರು..?
40-45 ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿಎಲ್ ಸಂತೋಷ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ, ಮೊದಲು ಅವರ ಶಾಸಕರು ಹಾಗೂ ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ ಎಂದಿದ್ದರು. ಅಲ್ಲದೆ, ಒಂದು ದಿನ ಅಲ್ಲ ಒಂದು ತಿಂಗಳ ಸಮಯ ನೀಡುತ್ತೇನೆ. 45 ಶಾಸಕರಲ್ಲ, ನಾಲ್ಕು ಜನ ಶಾಸಕರನ್ನು ಕರೆದುಕೊಂಡು ಹೋಗಿ ನೋಡೋಣ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದರು.
ಆರ್ಎಸ್ಎಸ್ನವರು ಯಾವುದೇ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ ಎಂದು ಹೇಳುತ್ತಾರೆ. ಆದರೆ ಬಿಜೆಪಿ ಪಕ್ಷದಲ್ಲಿ ಹೋಗಿ ಪಾಠ ಹೇಳುತ್ತಾರೆ ಎಂದು ಹೇಳಿದ್ದ ಪ್ರಿಯಾಂಕ್ ಖರ್ಗೆ, ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.w