Friday, September 29, 2023
spot_img
- Advertisement -spot_img

ಪರಿಷತ್‌ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು: 2024ರ ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ ಸಜ್ಜಾಗಿದ್ದು, ಇಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ಈ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಕ ಮಾಡಿದ್ದಾರೆ. ಬಿಜೆಪಿಯ ಮುಂಚೂಣಿ ನಾಯಕರಿಗೆ ಉಸ್ತುವಾರಿ ಜವಾಬ್ದಾರಿ ವಹಿಸಲಾಗಿದೆ.

ಯಾವ ಕ್ಷೇತ್ರಗಳಿಗೆ ಯಾರು ಉಸ್ತುವಾರಿ?

*ಈಶಾನ್ಯ ಪದವೀಧರ ಕ್ಷೇತ್ರ-ಬಿ.ಶ್ರೀರಾಮುಲು

*ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ.ರವಿ

*ಬೆಂಗಳೂರು ಪದವೀಧರ ಕ್ಷೇತ್ರ-ಆರ್.ಅಶೋಕ್

*ಆಗ್ನೇಯ ಶಿಕ್ಷಕರ ಕ್ಷೇತ್ರ-ಡಿ.ವಿ.ಸದಾನಂದಗೌಡ

*ನೈರುತ್ಯ ಶಿಕ್ಷಕರ ಕ್ಷೇತ್ರ-ಸಿ.ಟಿ.ರವಿ

*ದಕ್ಷಿಣ ಶಿಕ್ಷಕ ಕ್ಷೇತ್ರ -ಕೆ.ಎಸ್‌.ಈಶ್ವರಪ್ಪ

*ಬೆಂಗಳೂರು ಶಿಕ್ಷಕರ ಕ್ಷೇತ್ರ-ಡಾ.ಸಿ.ಎನ್.ಅಶ್ವಥ್ ನಾರಾಯಣ್‌

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles