ದೆಹಲಿ : ಪ್ರಧಾನಿ ನರೇಂದ್ರ ಮೋದಿ ತವರಿನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿದ್ದು, ಕರ್ನಾಟಕದತ್ತ ಎಲ್ಲರೂ ಗಮನ ಹರಿಸಿದ್ದಾರೆ. ಪ್ರತಿಷ್ಠೆಯ ಕಣವಾಗಿರುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂದು ರಾಷ್ಟ್ರೀಯ ಪಕ್ಷಗಳು ಜಿದ್ದಾಜಿದ್ದಿಗೆ ಬಿದ್ದಿವೆ.
ಕಾಂಗ್ರೆಸ್, ಜೆಡಿಎಸ್‌ನಿಂದ ಹಲವು ಮುಖಂಡರು ಬಿಜೆಪಿ ಸೇರಲು ತಯಾರಿ ಮಾಡಿಕೊಳ್ತಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರ ಮೂಲಕ ಅರ್ಜಿ ಹಾಕಲು ಕಸರತ್ತು ನಡೆಸಿದ್ದಾರೆ. ಮೋದಿ ಹಾಗೂ ಅಮಿತ್ ಶಾ ವರ್ಚಸ್ಸಿನಿಂದ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಹಲವರು ಇದ್ದು, ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ವಲಸಿಗರೂ ಸೇರಿದಂತೆ 15-20 ಮಂದಿ ನಮ್ಮ ಸಂಪರ್ಕದಲ್ಲೇ ಇದ್ದಾರೆ ಎಂದಿದ್ದಾರೆ. ಇದೀಗ ಶಾಸಕ ಎಚ್. ವಿಶ್ವನಾಥ್ ಅವರು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಬಳಿಕ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರೋದು ಮತ್ತೆ ವಲಸೆ ಹೋಗ್ತಾರಾ ಅನ್ನೋ ಅನುಮಾನಕ್ಕೆ ಕಾರಣವಾಗಿದೆ. ಎರಡೂ ಪಕ್ಷಗಳೂ ಆಪರೇಷನ್ ಶುರು ಮಾಡಿವೆ. ಗುಜರಾತ್ ಚುನಾವಣೆಯ ನಂತರ ಕರ್ನಾಟಕ ಚುನಾವಣಾ ಅಖಾಡ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಜೆಡಿಎಸ್‌ನ ಹಲವು ಮುಖಂಡರು ಪಕ್ಷ ಸೇರಲು ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.
ಆದ್ರೆ ಕೈ-ತೆನೆ ಪಕ್ಷಗಳ ಹಾಲಿ ಶಾಸಕರೂ ಕಮಲ ಬಾವುಟ ಹಿಡೀತಾರಾ? ಜನವರಿ ಬಳಿಕ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಪಕ್ಷಾಂತರ ಪರ್ವ ನಡೆಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ.ಇನ್ನೂ ಕೈಪಾಳದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕೈ-ತೆನೆ ಹಲವು ಮುಖಂಡರು ಬಿಜೆಪಿ ಸೇರುವುದಾಗಿ ಘೋಷಿಸಿದ ಬೆನ್ನಲ್ಲೇ ಜೆಡಿಎಸ್‌ನಿಂದ 15 ರಿಂದ 20 ಮಂದಿ ಕಾಂಗ್ರೆಸ್ ಸೇರಲು ಸಿದ್ಧವಾಗಿದ್ದಾರೆ. ಬಿಜೆಪಿಯಿಂದಲೂ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಮತದಾನೋತ್ತರ ಸಮೀಕ್ಷೆಗಳು ಸ್ವತ: ಬಿಜೆಪಿಯ ನಿರೀಕ್ಷೆಗೂ ಮೀರಿ ಗುಜರಾತ್ ನಲ್ಲಿ ಕಮಲ ಪಕ್ಷ ಅರಳಿಸಿ ಅತಿ ಹೆಚ್ಚು ಶಾಸಕರನ್ನು ಹೊಂದಿದ ದಾಖಲೆ ಬರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಮೀತ್ ಷಾ ಚಮತ್ಕಾರದಿಂದ ಬಿಜೆಪಿ ಅಧಿಕಾರ ಖಾತ್ರಿಯಾಗಿದೆ.