ನವದೆಹಲಿ: ದೇಶದಲ್ಲಿ ಹಣದುಬ್ಬರ, ನಿರುದ್ಯೋಗ, ಮಣಿಪುರದಲ್ಲಿ ಉಲ್ಬಣಗೊಳ್ಳುತ್ತಿರುವ ಹಿಂಸಾಚಾರ, ಅಸಮಾನತೆ ಮತ್ತು ಅವನತಿಯ ಸ್ಥಿತಿಯನ್ನು ನಿಯಂತ್ರಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಹೈದರಾಬಾದ್ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ ಅಂತ್ಯವಾಗಿದ್ದು, ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜೊತೆಗೆ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಪುನರ್ರಚಿಸಲಾಗಿದೆ.
ಇದನ್ನೂ ಓದಿ: ‘ಮೋದಿ ಅಧಿಕಾರಕ್ಕೆ ಬಾರದಿದ್ರೆ ಗಡಿಯಲ್ಲಿ ನುಸುಳುಕೋರರು ತುಂಬಿಕೊಳ್ತಾರೆ’
ದೇಶವು ‘ಗಂಭೀರ ಆಂತರಿಕ ಸವಾಲುಗಳನ್ನು’ ಎದುರಿಸುತ್ತಿರುವ ಸಂದರ್ಭ ಕೇಂದ್ರ ಕಣ್ಣುಮುಚ್ಚಿ ಕುಳಿತಿದೆ. ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಂತಹ ಘಟನೆಗಳು ದೇಶದ ಹೆಸರಿಗೆ ಕಳಂಕ ತರುತ್ತಿದೆ. ಆದರೆ ಬಿಜೆಪಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ನಾಳೆ ಕುರುಡುಮಲೆಗೆ ಬಿಎಸ್‌ವೈ; ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ
ದೇಶದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಿದ್ದರೂ ಅವರು ಈ ಎಲ್ಲಾ ಘಟನೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ಸಂಸತ್‌ನಲ್ಲೂ ವಿಪಕ್ಷ ನಾಯಕರ ಧ್ವನಿ ಅಡಗಿಸುವ ಕಾರ್ಯ ನಡೆಯುತ್ತಲೇ ಇದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.