ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಾತ್ಯತೀತ ಜನತಾ ದಳ (ಜೆಡಿಎಸ್) ಜೊತೆ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
ನಗರದ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಂತೋಷ ತಂದಿದೆ. ಜೆಡಿಎಸ್ ಗೆ ನಾಲ್ಕು ಸೀಟ್ ಕೊಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಮೈತ್ರಿಯಿಂದ ನಮ್ಮಗೆ ಶಕ್ತಿ ಬಂದಿದೆ. ಇದರಿಂದ 25ಕ್ಕೂ ಹೆಚ್ಚು ಸೀಟ್ ಗೆಲ್ಲಲು ನಮಗೆ ಸಹಾಯವಾಗಲಿದೆ ಎಂದರು.
ಸೆಪ್ಟೆಂಬರ್ 16ರಿಂದ ರಾಜ್ಯಾದ್ಯಂತ ಪ್ರತಿಭಟನೆ : ಕಾವೇರಿ ಹೋರಾಟವನ್ನು ನಾವು ತೀವ್ರಗೊಳಿಸುತ್ತೇವೆ, ರೈತರ ಪರ ನಿಲ್ಲುತ್ತೇವೆ. ರಾಜ್ಯದ ರೈತರಿಗೆ ಕೃಷಿಗೆ, ಕುಡಿಯುವ ನೀರು ಸಿಗುತ್ತಿಲ್ಲ. ಸರ್ಕಾರ ಬರಗಾಲ ಘೋಷಣೆ ಮಾಡದೆ ವಿಳಂಬ ತೋರುತ್ತಿದೆ ಎಂದರು. ಸೆಪ್ಟೆಂಬರ್ 16ರಂದು ಕೋಲಾರದ ಕುರುಡುಮಲೆಯಲ್ಲಿ ಪೂಜೆ ಸಲ್ಲಿಸಿ, ಬಳಿಕ ರಾಜ್ಯಾದ್ಯಂತ ಪ್ರವಾಸ ನಡೆಸಿ ಪ್ರತಿಭಟನೆ ಮಾಡುತ್ತೇವೆ ಎಂದು ಘೋಷಣೆ ಮಾಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.