ಬೆಂಗಳೂರು : ನಾಳೆ ದೆಹಲಿಗೆ ತೆರಳಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಮೈತ್ರಿ ಮಾತುಕತೆ ನಡೆಸಲಿದ್ದಾರ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.
ದೆಹಲಿಯಲ್ಲಿ ವಿಶೇಷ ಅಧಿವೇಶನ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದರ ಬೆನ್ನಲ್ಲೇ ಈಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡ ನಾಳೆ ದೆಹಲಿಗೆ ತೆರಳಲಿದ್ದಾರೆ. ಈ ಬಗ್ಗೆ ಹಲವಾರು ಸಂಶಯಗಳು ಮನೆ ಮಾಡಿದ್ದು, ಮೈತ್ರಿ ಮಾತುಕತೆಯಾದರೆ ಈ ಭಾರಿಯ ಲೋಕಸಭಾ ಚುನಾವಣೆಗೆ ಜೊತೆಯಾಗಿ ಕಾಂಗ್ರೆಸ್ ವಿರುದ್ಧ ಕಣಕ್ಕೆ ಇಳಿಯಲಿದ್ದಾರೆ.
ಇದನ್ನೂ ಓದಿ : ಮಹಿಳಾ ಮೀಸಲಾತಿ ಮಸೂದೆ: ರಾಹುಲ್ ಹಳೆಯ ಟ್ವೀಟ್ ಹಂಚಿಕೊಂಡ ಜೈರಾಮ್ ರಮೇಶ್!
ಸದ್ಯ ದೆಹಲಿಯಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರದಲ್ಲಿರುವ ಸಮಸ್ಯೆಯ ಬಗ್ಗೆ ಹಾಗೂ ಮಳೆಯ ಅಭಾವದಿಂದ ರೈತರಿಗಾಗಿರುವ ನಷ್ಟದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಇದರ ಜೊತೆ ಮೈತ್ರಿ ಮಾತುಕತೆಯು ನಡೆಯಲಿದೆ ಎಂಬುದು ಸದ್ಯದ ಸಂಗತಿಯಾಗಿದೆ.
ಇದನ್ನೂ ಓದಿ : ಚೈತ್ರಾ ವಂಚನೆ ಕೇಸ್ : ವಿನಯ್ ಗುರೂಜಿ, ವಿಹೆಚ್ಪಿ, ಭಜರಂಗದಳ ಮುಖಂಡರಿಗೆ ಸಿಸಿಬಿ ನೋಟಿಸ್
ಈ ಭೇಟಿಯು ಮೈತ್ರಿ ಒಪ್ಪಂದಕ್ಕಾದರೆ, ಜೆಡಿಎಸ್ ನಾಯಕತ್ವವು ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಐದು ಸ್ಥಾನಗಳನ್ನು ಕೇಳಬಹುದು. ಸಂಧಾನದ ನಂತರ ಜೆಡಿಎಸ್ ನಾಲ್ಕಕ್ಕೆ ತೃಪ್ತಿಪಟ್ಟುಕೊಳ್ಳುವ ಸಾಧ್ಯತೆಯಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.