Monday, March 27, 2023
spot_img
- Advertisement -spot_img

ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ

ಚಾಮರಾಜನಗರ: ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಲೆಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದರು.

ಮೈಸೂರಿಗೆ ವಿಮಾನದಲ್ಲಿ ಬಂದ ನಡ್ಡಾ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. ನಂತರ ಮಲೆಮಹದೇಶ್ವರನ ದರ್ಶನ ಪಡೆದರು. ರಾಜ್ಯ ಮತ್ತು ಕೇಂದ್ರ ಡಬಲ್​ ಇಂಜಿನ್​ ಸರ್ಕಾರದ ಸಾಧನೆ ಜನರಿಗೆ ತಿಳಿಸಲು ಬಿಜೆಪಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ರಥ ಯಾತ್ರೆ ಮಾಡಲಿದೆ.

ಬೆಂಗಳೂರಿನ ಕೆಂಪೇಗೌಡ ಪ್ರತಿಮೆ, ಚಾಮರಾಜನಗರದ ಮಹದೇಶ್ವರ ಬೆಟ್ಟ, ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮತ್ತು ಬೀದರ್ ಜಿಲ್ಲೆ ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆ ನಡೆಯಲಿದೆ. ಅಂದಹಾಗೆ ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುವ ವೇಳೆ ಸಚಿವ ವಿ. ಸೋಮಣ್ಣ ಭಾಗವಹಿಸಿರಲಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಜರಿದ್ದರು. ಇನ್ನೂ ರಾಜ್ಯ ಸರ್ಕಾರಿ ನೌಕರರು ಮುಷ್ಕರ ವಾಪಸ್ ಪಡೆದಿರುವುದಕ್ಕೆ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.

Related Articles

- Advertisement -

Latest Articles