ಬೆಂಗಳೂರು: ನನಗೆ ಬೆಂಬಲ ಕೊಟ್ಟು ಬಿಜೆಪಿ ಗೆಲ್ಲಿಸಬೇಕೆಂದು ಕೈಜೋಡಿಸಿ ಪ್ರಾರ್ಥನೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ಪ್ರವಾಸ ಮಾಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುವೆ, ನಾನೇ ಸ್ವಯಂ ಪ್ರೇರಿತ ವಾಗಿ ನಿವೃತ್ತಿಯಾಗುತ್ತಿದ್ದೇನೆ ಎಂದರು. ನನ್ನ ಬಹಳ ವರ್ಷದ ಕನಸು ನನಸಾಗಿದೆ. ಅಭಿವೃದ್ಧಿಗೆ ಏನೆಲ್ಲ ಮಾಡಬೇಕೋ ಅದನ್ನೆಲ್ಲ ಮಾಡಿದ್ದೇನೆಂಬ ತೃಪ್ತಿ ಇದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿಶ್ ಶಾ ನೇತೃತ್ವದಿಂದ ನಮಗೆ ಆನೆ ಬಲ ಸಿಕ್ಕಿದಂತಾಗಿದೆ ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಮೋದಿ ಬರುತ್ತಾರೆ, 27 ನೇ ತಾರೀಖು ನನಗೆ 80 ವರ್ಷ ಆಗುತ್ತಿದೆ ಎಂದು ತಿಳಿಸಿದರು. ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ. ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಮತ್ತೆ ನಾನು ಸದನದ ಒಳಗೆ ಬರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದರು.
ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದಾರೆ.