ಬೆಂಗಳೂರು: ಅನಾರೋಗ್ಯದಿಂದ ಇತ್ತೀಚೆಗಷ್ಟೇ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಈಶ್ವರಪ್ಪ, ಆರೋಗ್ಯ ವಿಚಾರಿಸಿದ್ದಾರೆ.
ಜೆ.ಪಿ. ನಗರದ ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕ ಈಶ್ವರಪ್ಪ ಅವರಿಗೆ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ ಸಾಥ್ ನೀಡಿದರು.
ಇದನ್ನೂ ಓದಿ; ಪೊಲೀಸರು ವಶಕ್ಕೆ ಪಡೆಯುವ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಚೈತ್ರಾ ಕುಂದಾಪುರ!
ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತವಾಗುತ್ತಿದ್ದಂತೆಯೇ ಹಲವು ಬಿಜೆಪಿ ನಾಯಕರು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಆರಗ ಜ್ಞಾನೇಂದ್ರ, ಪ್ರತಾಪ್ ಸಿಂಹ ಸೇರಿದಂತೆ ಹಲವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಆರೋಗ್ಯ ವಿಚಾರಿಸುವ ನೆಪದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗುವ ಬಿಜೆಪಿ ನಾಯಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬೆನ್ನಲ್ಲೇ ‘ಕಮಲ-ದಳ’ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಸಾರಾ ಮಹೇಶ್ ಜೊತೆ ಒಂದೇ ಕಾರಿನಲ್ಲಿ ಈಶ್ವರಪ್ಪ ಆಗಮಿಸಿದ್ದು ಗಮನ ಸೆಳೆಯಿತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.