ಬೆಂಗಳೂರು: ಈ ಬಾರಿ ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ನಾದಬ್ರಹ್ಮ ಹಂಸಲೇಖ ಅವರನ್ನು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಅವರು ಸನ್ಮಾನಿಸಿದ್ದಾರೆ. ಇಂದು ಬೆಳಗ್ಗೆ ಅವರ ಮನೆಗೆ ಹೋಗಿ ಸನ್ಮಾನಿಸಿದ್ದಾರೆ.
ಈ ಹಿಂದೆ ಗೋಪಾಲಯ್ಯ ಕೂಡ ಕಾಂಗ್ರೆಸ್ ಸೇರ್ತಾರೆ ಅನ್ನೋ ವದಂತಿಗಳು ಹಬ್ಬಿದ್ದವು. ಇದಕ್ಕೆ ಅವರು, ನಾನು ಬಿಜೆಪಿ ಪಕ್ಷ ಬಿಡಲ್ಲ ಅನ್ನೋ ಹೇಳಿಕೆಯನ್ನು ಕೊಟ್ಟಿದ್ದರು. ಆದ್ರೆ, ಈಗ ಶಾಸಕ ಕೆ. ಗೋಪಾಲಯ್ಯ ಕಾಂಗ್ರೆಸ್ ನಿರ್ಧಾರವನ್ನು ಒಪ್ಪಿಕೊಂಡಿದ್ದಾರಾ? ಎಂಬ ಪ್ರಶ್ನೆ ಮೂಡುತ್ತಿದೆ.


ಇದನ್ನೂ ಓದಿ : ತಾಯಂದಿರ ಮುಖದಲ್ಲಿ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ: ಸಿಎಂ
ಅಲ್ಲದೆ, ಅಪರೇಷನ್ ಕಮಲಕ್ಕೆ ಒಳಗಾಗಿ ಸಂಮಿಶ್ರ ಸರ್ಕಾರ ಕೆಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ 17 ಶಾಸಕರಲ್ಲಿ ಕೆ. ಗೋಪಾಲಯ್ಯ ಕೂಡ ಒಬ್ಬರಾಗಿದ್ದರು. ಈಗ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿರುವುದು ಸಾವಿರಾರರು ಪ್ರಶ್ನೆಗಳಿಗೆ ಕಾರಣವಾಗಿದೆ. ಅಲ್ಲದೆ, ಕೆ. ಗೋಪಾಲಯ್ಯ ಕಾಂಗ್ರೆಸ್ ಪಕ್ಷದ ಮೇಲೆ ಸಾಫ್ಟ್ ಕಾರ್ನರ್ ತೋರುತ್ತಿರುವುದು ಯಾಕೆ? ಎಂಬೆಲ್ಲ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.