ಬೆಂಗಳೂರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಬೂದಿಮುಚ್ಚಿದ ಕೆಂಡಂದಂತಿದೆ. ಇದರ ನಡುವೆಯೇ ಈ ವಿಚಾರಕ್ಕೆ ಪುಷ್ಠಿ ನೀಡುವಂತೆ ಇಂದು ಸೋಮಶೇಖರ್ ಅವರ ಬೆಂಬಲಿಗರ ದಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮನೆ ಸೇರಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, ಯಶವಂತಪುರ ವಿಧಾನಸಭಾ ಕ್ಷೇತ್ರದ ಅನ್ಯ ಪಕ್ಷದ ಕಾರ್ಯಕರ್ತರು, ಮುಖಂಡರು ಇಂದು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ನಂಬಿ ಪಕ್ಷ ಸೇರ್ಪಡೆಯಾದರು. ಅವರನ್ನು ಸ್ವಾಗತಿಸಿ, ಶುಭ ಹಾರೈಸಿದೆ ಎಂದಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಂವಿಧಾನ, ರಾಷ್ಟ್ರಧ್ವಜ ನೀಡಿದ ಪಕ್ಷ ನಮ್ಮದು. ಕಾಂಗ್ರೆಸ್ ಪಕ್ಷ ಪ್ರತಿಯೊಂದು ವರ್ಗದ ಜನರ ಬದುಕು ಉತ್ತಮಗೊಳಿಸಲು ಹಲವಾರು ಯೋಜನೆಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದಿದ್ದಾರೆ.
ಇದನ್ನೂ ಓದಿ: ವರಮಹಾಲಕ್ಷ್ಮೀ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಸ್ಪೆಷಲ್ ಗಿಫ್ಟ್!
ಕಾಂಗ್ರೆಸ್‌ನ ಅನ್ನಭಾಗ್ಯ, ಕ್ಷೀರಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳು ಜನರ ಜೀವನಕ್ಕೆ ಆಸರೆಯಾಗಿವೆ. ನುಡಿದಂತೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ಪಕ್ಷದ ಶಕ್ತಿ ಮತ್ತಷ್ಟು ಬಲಗೊಳ್ಳುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.