ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಕೇಳಿ ಬರುತ್ತಿರುವ ನಡುವೆಯೇ ಉಭಯ ಪಕ್ಷಗಳ ನಾಯಕರ ಪರಸ್ಪರ ಭೇಟಿಯು ಚರ್ಚೆಗೆ ಗ್ರಾಸವಾಗುತ್ತಿದೆ.
ಇಂದು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಇಬ್ಬರೂ ಕಾಂಗ್ರೆಸ್ ಸೇರಲು ಮುಂದಾಗಿದ್ದಾರಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಇಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ಈ ಮೂವರ ಭೇಟಿಯು ತೀವ್ರ ಕುತೂಹಲ ಮೂಡಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಮೇಗೌಡ, ನಾನು ಮತ್ತು ಡಿ.ಕೆ.ಶಿವಕುಮಾರ್ ಅವರು ಸಂಬಂಧಿಕರು. ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲು ಸೇರಿದ್ದೆವು. ಅದನ್ನು ಬಿಟ್ಟರೆ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆದಿಲ್ಲ. ಸಂಬಂಧಿಕನಾಗಿ ಮಾತನಾಡಿದ್ದೇನೆ ಎಂದಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಶಿವರಾಮ್ ಹೆಬ್ಬಾರ್ ಏನೂ ಪ್ರತಿಕ್ರಿಯೆ ನೀಡಿಲ್ಲ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.