ಬೆಂಗಳೂರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರವು ರಾಜ್ಯ ರಾಜಕಾರಣದಲ್ಲಿ ಜೋರಾಗಿ ಕೇಳಿಬರುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ನಿನ್ನೆಯಷ್ಟೇ ಡಿಕೆಶಿ ಜೊತೆಗೆ ಎಸ್.ಟಿ.ಸೋಮಶೇಖರ್ ಅವರು ವೇದಿಕೆ ಹಂಚಿಕೊಂಡಿದ್ದರು. ಇದರಿಂದ ಸೋಮಶೇಖರ್ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಇನ್ನಷ್ಟು ಸದ್ದು ಮಾಡುತ್ತಿದೆ.
ಇದೀಗ ಮತ್ತೊಂದು ಸೋಮಶೇಖರ್ ಅವರ ಮತ್ತೊಂದು ನಡೆಯೂ ಕಾಂಗ್ರೆಸ್ ಸೇರುವ ವಿಚಾರಕ್ಕೆ ಬಲ ನೀಡಿದೆ. ಇನ್ನು ನಾಳೆ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮದ ಪೂರ್ವಭಾವಿ ಸಭೆಗೆ ಕಾರ್ಯಕರ್ತರಿಗೆ ಆಹ್ವಾನ ನೀಡಿರುವ ಸೋಮಶೇಖರ್, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಕ್ಕೆ ತಮ್ಮ ಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ಆಯೋಜಿಸಿದ್ದಾರೆ.


ಈ ಬಗ್ಗೆ ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪರವಾದ ಫೋಟೋ ಹಂಚಿಕೊಳ್ಳುವ ಮೂಲಕ ಪಕ್ಷ ಸೇರ್ಪಡೆ ವಿಚಾರದ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಲ್ಲದೆ, ನಾಳೆ ನಡೆಯುವ ಇದೇ ಸಭೆಯಲ್ಲಿ ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ದಿನಾಂಕವನ್ನೂ ಘೋಷಣೆ ಮಾಡಲಿದ್ದಾರೆ. ಕಾರ್ಯಕರ್ತರ ಸಭೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಅಜ್ಜಯ್ಯನ ಮೇಲೆ ಆಣೆ ಮಾಡು ಅಂದೋರೆಲ್ಲ ಏನಾದ್ರು?: ಡಿಕೆಶಿ
ಅದರಂತೆ ನಾಳೆ ಮಧ್ಯಾಹ್ನ 3 ಗಂಟೆಗೆ ಸಭೆ ಮಾಡಿ, ಕಾಂಗ್ರೆಸ್ ಸೇರುವ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡಲಿದ್ದಾರೆ. ಇನ್ನು ಹಲವು ದಿನಗಳಿಂದ ಸದ್ದು ಮಾಡುತ್ತಿರುವ ಇವರ ಕಾಂಗ್ರೆಸ್ ಸೇಪರ್ಡೆ ವಿಚಾರಕ್ಕೆ ನಾಳೆಯಾದರೂ ತೆರೆಬೀಳಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ..
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.