ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಏನೂ ಬಹಳ ಸತ್ಯ ಹರಿಶ್ಚಂದ್ರ ಅಲ್ಲ ಎಂದು ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ವಾಗ್ದಾಳಿ ಮಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ತಾಜ್ ವೆಸ್ಟ್ ಎಂಡ್ ಹೋಟೆಲ್ನಿಂದ ಆಡಳಿತ ನಡೆಸುತ್ತಿದ್ದರು. H.D.ಕುಮಾರಸ್ವಾಮಿ ಸ್ವಜಾತಿ ಬಿಟ್ಟು ಹೊರಬರದ ಕೂಪ ಮಂಡೂಕ ಎಂದು ಕಿಡಿಕಾರಿದರು. ಕುಮಾರಸ್ವಾಮಿ ಕುರಿತ ಸಿಡಿ, ತೋಟದ ಮನೆ ಮತ್ತು ತಾಜ್ ವೆಸ್ಟ್ ಎಂಡ್ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಡಬೇಕಾಗುತ್ತದೆ , ಇದೇ ತರಹ ಮುಂದುವರಿದ್ರೆ ನಾವು ಕೂಡ ಮುಂದೆ ಮಾತಾಡ್ತೇವೆ ಎಂದರು.
ಬ್ರಾಹ್ಮಣ ಸಮಾಜದ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಬಿಜೆಪಿ ಖಂಡಿಸುತ್ತೆ. ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಬರುತ್ತೆ ಅಂತಾ ಅಂದುಕೊಂಡಿದ್ದಾರೆ. ನನ್ನ ಮನೆ ಬಾಗಿಲಿಗೆ ಬರಬೇಕೆಂದು ಅದ್ಭುತ ಆಸೆ ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಸತ್ಯ ಹೇಳಿದರೆ ಮಾಜಿ ಸಿಎಂ H.D.ಕುಮಾರಸ್ವಾಮಿಗೆ ಕೋಪ ಬರುತ್ತದೆ. ಕರ್ನಾಟಕದಲ್ಲಿ ಪೇಶ್ವೆ ಬ್ರಾಹ್ಮಣ, ಸ್ಮಾರ್ತ ಬ್ರಾಹ್ಮಣ ಅಂತಾ ಏನಿಲ್ಲ. ಬ್ರಾಹ್ಮಣರ ಬಗ್ಗೆ ಕುಮಾರಸ್ವಾಮಿ ಏನೂ ಪಿಹೆಚ್ಡಿ ಮಾಡಿದ್ದಾರಾ ಎಂದು ಪ್ರಶ್ನೆ ಮಾಡಿದರು.