ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಅಲರ್ಟ್ ಆದ ಸಂಸದ ಪ್ರತಾಪ್ ಸಿಂಹ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಕಳೆದ ಭಾನುವಾರ ದೇವೇಗೌಡ ಅವರು ಆದಿ ಚುಂಚನಗಿರಿ ನೂತನ ಶಾಖಾ ಮಠಕ್ಕೆ ಭೇಟಿ ನೀಡಿದರು. ಈ ವೇಳೆ ಪ್ರತಾಪ ಸಿಂಹ ದೇವೇಗೌಡ ಹಾಗೂ ಜಿ.ಟಿ ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಅಲ್ಲಿ ಮಂಡಿಯೂರಿ ನಮಸ್ಕರಿಸುತ್ತಿರುವ ಫೋಟೊ ವೈರಲ್ ಆಗಿದೆ. ಒಂದು ಫೋಟೊ ಹಲವು ರಾಜಕೀಯ ಲೆಕ್ಕಾಚಾರಗಳನ್ನು ಹುಟ್ಟು ಹಾಕಿದೆ.
ಇದನ್ನೂ ಓದಿ : ತಡರಾತ್ರಿ ಬಿಜೆಪಿ ಕೋರ್ ಕಮಿಟಿ ಸಭೆ : ಅಸಮಾಧಾನಿತರು ಗೈರು
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರು ಅತಿ ಹೆಚ್ಚು ಪ್ರಭಾಲ್ಯ ಹೊಂದಿದ್ದಾರೆ. ಈಗಲಿಂದಲೇ ಸಂಸದ ಪ್ರತಾಪ ಸಿಂಹ ಜೆಡಿಎಸ್ ಮತಬ್ಯಾಂಕ್ ಕೈ ಹಾಕಿದ್ದಾರೆ. ಮೈಸೂರು ಭಾಗದ ಜೆಡಿಎಸ್ ನಾಯಕರೊಂದಿಗೆ ಪ್ರತಾಪ ಸಿಂಹ ಉತ್ತಮ ಭಾಂದವ್ಯ ಹೊಂದಿದ್ದಾರೆ. ಈಗಾಗಲೇ ಎರಡು ಭಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರತಾಪ ಸಿಂಹ, ಹ್ಯಾಟ್ರಿಕ್ ಗೆಲುವಿಗೆ ಚುನಾವಣಾ ರಣತಂತ್ರ ಹೆಣೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ : ಆರ್.ಅಶೋಕ್‌ಗೆ ಸಂಕಷ್ಟ ತಂದಿಟ್ಟ ‘ಡಿ.ಕೆ. ಸಹೋದರರು’!
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.