Friday, September 29, 2023
spot_img
- Advertisement -spot_img

ಲೋಕಸಭಾ ಚುನಾವಣೆ: 155 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಲಿದೆ ಬಿಜೆಪಿ!

ನವದೆಹಲಿ: ಲೋಕಸಭೆ ಚುನಾವಣೆಗೆ ಇನ್ನೂ ತಿಂಗಳುಗಳೇ ಬಾಕಿ ಇದೆ. ಆದರೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಯಲ್ಲಿವೆ. ಲೋಕಸಭೆ ಚುನಾವಣೆಗೂ ಮುನ್ನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಹ ನಡೆಯಬೇಕಿದೆ. ಆದರೆ 2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಸದ್ಯದಲ್ಲೇ 155 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಲಿದೆ ಎಂದು ವರದಿಯಾಗಿದೆ.

ಲೋಕಸಭೆ ಚುನಾವಣೆ ಸಿದ್ಧತೆ ಹಿನ್ನೆಲೆ ಬಿಜೆಪಿ ಈಗಾಗಲೇ ಹಲವು ಸುತ್ತಿನ ಸಭೆಯನ್ನೂ ಮಾಡಿ ಮುಗಿಸಿದೆ. ಈ ಸಭೆಯಲ್ಲಿ ಲೋಕಸಭೆ ಕುರಿತು ಚರ್ಚೆ ನಡೆದಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ ಸುಮಾರು 155 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮೋದಿ ಆಡಳಿತ ಮೆಚ್ಚಿದ ಶೇ.80ರಷ್ಟು ಭಾರತೀಯರು: ಸಮೀಕ್ಷೆ

ನಾವು ಆ ಕುರಿತು ಕೆಲಸ ಮಾಡುತ್ತಿದ್ದೇವೆ ಮತ್ತು 2024ರಲ್ಲಿ ಕನಿಷ್ಠ 350 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. 2014 ಅಥವಾ 2019ರಲ್ಲಿ ನಮ್ಮ ಅಭ್ಯರ್ಥಿಗಳು ಸೋತಿರುವ 155ಕ್ಕೂ ಹೆಚ್ಚು ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಬಹಳ ವಿವೇಕಯುತ ರೀತಿಯಲ್ಲಿ ಅಂತಿಮಗೊಳಿಸಲಿದೆ. ಹೀಗಾಗಿ ಅವರು ತಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಯ ಕೆಲಸ ಮಾಡಲು ಹಾಗೂ ಕ್ಷೇತ್ರದ ಜನತೆ ಜೊತೆ ಬೆರೆಯಲು ಸಹಾಯಕವಾಗಲಿದೆ ಎಂದು ನಾವು ನಂಬಿದ್ದೇವೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಮಾಧ್ಯಮದ ಎದುರು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ರಾಜ್ಯಗಳು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಮೊದಲೇ ಪ್ರಕಟಿಸಲು ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಕ್ಷೇತ್ರಗಳು ಬಿಜೆಪಿಯ ಸಿ ಮತ್ತು ಡಿ ವಲಯಗಳಾಗಿ ವಿಂಗಡಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಕೇಜ್ರಿವಾಲ್ ಮುಂದಿನ ಪ್ರಧಾನಿ ಅಭ್ಯರ್ಥಿ’; ಮೈತ್ರಿಕೂಟ ಸಭೆಗೂ ಮುನ್ನ ಶಾಕ್ ಕೊಟ್ಟ ಆಪ್‌!

ಈ ಸಂಬಂಧ ಸೆಪ್ಟೆಂಬರ್‌ನಲ್ಲಿ ಸಭೆ ಸೇರಲು ಬಿಜೆಪಿ ನಿರ್ಧರಿಸಿದೆ. ರಾಜ್ಯಗಳ ಉಸ್ತುವಾರಿ ಹೊಂದಿರುವ ಬಹುತೇಕ ಎಲ್ಲಾ ಕೇಂದ್ರ ಸಚಿವರು ಮತ್ತು ರಾಷ್ಟ್ರೀಯ ಪದಾಧಿಕಾರಿಗಳಿಗೆ ಸಭೆಯಲ್ಲಿ ಮಂಡಿಸಬೇಕಾದ ತಮ್ಮ ಕ್ಷೇತ್ರಗಳ ವರದಿಗಳನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ 155 ಕ್ಷೇತ್ರಗಳಲ್ಲಿ ಶೇ50ಕ್ಕಿಂತ ಹೆಚ್ಚಿನ ಕ್ಷೇತ್ರಗಳು ದಕ್ಷಿಣ ಭಾರತದ್ದಾವಿವೆ ಎಂದು ತಿಳಿದುಬಂದಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles