ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಮ್ಮ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು, ಬಿಜೆಪಿ ತನ್ನ ಸಾಧನೆ ಕುರಿತಾಗಿ ತಿಳಿಸಲು ಮನೆ ಮನೆ ಸಂಪರ್ಕ ಅಭಿಯಾನ ಶುರುಮಾಡಿದೆ. ಜ.21ರಿಂದ ಜ.29ರವರೆಗೆ ರಾಜ್ಯದಲ್ಲಿ ಈ ಅಭಿಯಾನ ಆರಂಭವಾಗಲಿದ್ದು, ಅಭಿಯಾನದ ಸಂಚಾಲಕರಾಗಿ ಡಾ.ಅಶ್ವತ್ಥ್ ನಾರಾಯಣರನ್ನು ನೇಮಿಸಲಾಗಿದೆ.
ಅಭಿಯಾನದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸಂತೋಷ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಬೂತ್ ಮಟ್ಟದಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಗುರುತಿಸಿ ಡಬಲ್ ಎಂಜಿನ್ ಸರ್ಕಾರದ ಯೋಜನೆ ರೂಪಿಸಲು ಸೂಚಿಸಲಾಗಿದೆ.
ಜ.7, 8ರಂದು ಜಿಲ್ಲಾ ಕೇಂದ್ರ, ಜ.12, 13ರಂದು ಮಂಡಲ ಮಟ್ಟದಲ್ಲಿ, ಜನವರಿ 17, 18, 19ರಂದು ಬೂತ್ ಮಟ್ಟದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೂಚಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಡಿ.30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ವಲಯದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಸಮಾವೇಶದಲ್ಲಿ ಯಶಸ್ವಿನಿ ಯೋಜನೆಗೆ ಅಮಿತ್ ಶಾ ಮರು ಚಾಲನೆ ನೀಡಲಿದ್ದಾರೆ. ಈಗಾಗಲೇ ಯಶಸ್ವಿನಿ ಯೋಜನೆಗೆ 20 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಡಿ.31ರಂದು ಮಲ್ಲೇಶ್ವರಂನ ಸೌಹಾರ್ದ ಫೇಡರೇಶನ್‍ಗೆ ಭೇಟಿ ನೀಡಿ ಸೌಹಾರ್ದ ಸಹಕಾರಿಗಳ ಸಭೆ ನಡೆಸಲಿದ್ದಾರೆ.