Monday, March 27, 2023
spot_img
- Advertisement -spot_img

ಕಾಂಗ್ರೆಸ್ ಪಕ್ಷದವರು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ

ಬಂಟ್ವಾಳ : ಬಂಟ್ವಾಳವಿಂದು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಹಿಂದೆ ಕೋಮುಗಲಭೆಯಿಂದ ತತ್ತರಿಸಿ ಹೋಗಿದ್ದ ಕ್ಷೇತ್ರ ಇದೀಗ ವಿಕಾಸಪಥದೆಡೆ ಸಾಗುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.

ಗ್ರಾಮವಿಕಾಸ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಬಂಟ್ವಾಳವನ್ನು 1.0 ಮತ್ತು 2.0 ಎಂಬ ಯುಗವನ್ನಾಗಿ ವಿಭಾಗಿಸಿ, ಈ ಹಿಂದೆ ಬಂಟ್ವಾಳದಲ್ಲಿ ನಿರಂತರ ಕೋಮುಹಿಂಸೆ, ಸೆಕ್ಷನ್ ಹಾಕುವ ಸನ್ನಿವೇಶವಿತ್ತು. ಶರತ್ ಮಡಿವಾಳ ಹತ್ಯೆ ಸಂದರ್ಭ ಬಂದೋಬಸ್ತ್ ಏರ್ಪಡಿಸಲು ನಾನೂ ಆಗ ಬಂದಿದ್ದೆ.

ಆಗ ಜನಸಾಮಾನ್ಯರು ಇದರಿಂದ ತೊಂದರೆ ಅನುಭವಿಸಿದ್ದರು. ಆಗ ಅದು 1.0 ಯುಗವಾಗಿತ್ತು. ಈಗ ನಡೆಯುತ್ತಿರುವುದು 2.0 ಅಭಿವೃದ್ಧಿಯ ಯುಗ, ಶಾಸಕ ರಾಜೇಶ್ ನಾಯ್ಕ್ ಗ್ರಾಮವಿಕಾಸ ಯಾತ್ರೆ ಮೂಲಕ ರಿಪೋರ್ಟ್ ಕಾರ್ಡ್ ನೀಡಿದ್ದಾರೆ ಎಂದರು.

ಇಡೀ ಕರ್ನಾಟಕಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಮಾದರಿಯಾಗಿದೆ. ರಾಜ್ಯದಲ್ಲಿ ಉತ್ತಮ 100 ಹಳ್ಳಿಗಳನ್ನು ಗುರುತಿಸಿದರೆ ಅದರಲ್ಲಿ ಶೇ.80 ರಷ್ಟು ಹಳ್ಳಿಗಳು ಕರಾವಳಿ ಕರ್ನಾಟಕಕ್ಕೆ ಸೇರಿರುತ್ತದೆ. ಹೀಗಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದವರು ಕರ್ನಾಟಕವನ್ನು ತನ್ನ ಎಟಿಎಂ ಮಾಡಿಕೊಳ್ಳಲು ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಗೆಲುವಿಗಾಗಿ ಯತ್ನಿಸುತ್ತಿದೆ. ಅಧಿಕಾರಕ್ಕೇನಾದರೂ ಬಂದರೆ ವರ್ಷಕ್ಕೆ ಹತ್ತು ಸಾವಿರ ಕೋಟಿ ಲೂಟಿ ಮಾಡಬಹುದು ಎಂದು ಆರೋಪಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿ, ರಾಮ ಮಂದಿರ ವಿರೋಧಿಗಳು ನಕಲಿ ಹಿಂದುಗಳು.. ಕಾಂಗ್ರೆಸ್ ನಾಯಕರು ನಕಲಿ ಹಿಂದುತ್ವ ಆಚರಿಸುವವರು. ಮೋದಿ ಇಂಜೆಕ್ಷನ್ ಇಲ್ಲದಿದ್ದರೆ ಸಿದ್ದರಾಮಯ್ಯ ಅವರನ್ನು ಬಯ್ಯೋದಕ್ಕೂ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

Related Articles

- Advertisement -

Latest Articles