Wednesday, March 22, 2023
spot_img
- Advertisement -spot_img

ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ : ಬಿಜೆಪಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಬಿಜೆಪಿ ಟೀಕಿಸಿದೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ, ದುಡ್ಡು ಕೊಟ್ಟು ಜನರನ್ನು ಕರೆದು ತರುವುದು, ಅವರಿಗೆಲ್ಲ ಬಿಟ್ಟಿ ಬಿಟ್ಟಿ ಭಾಗ್ಯ ಘೋಷಣೆ ಮಾಡುವುದು. ಆ ಕಡೆ ಅದೂ ಇಲ್ಲ, ಈ ಕಡೆ ಇದೂ ಇಲ್ಲ ಎಂದು ವ್ಯಂಗ್ಯವಾಡಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ಸಂಬಂಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ ಮಾಡಿದೆ. ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವೈರಲ್ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಟ್ವಿಟರ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಮಾರ್ಚ್ 01ರಂದು ಬೆಳಗಾವಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಾಯಿತು. ಈ ವೇಳೆ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬರುವ ಬಗ್ಗೆ ಸಿದ್ದರಾಮಯ್ಯ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಜೊತೆಗಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪರವಾಗಿ ಭರ್ಜರಿ ಪ್ರಚಾರ ನಡೆಯುತ್ತಿದೆ.

Related Articles

- Advertisement -

Latest Articles