ಬೆಂಗಳೂರು: ‘ಸ್ಯಾಂಟ್ರೋ ರವಿ’ಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರಿಗಾಗಲಿ ಬೊಮ್ಮಾಯಿ ಪುತ್ರ ಭರತ್‌ರಿಗಾಗಲಿ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಹೇಳಿದೆ.
ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ರಾಜ್ಯ ಘಟಕವು ಹೇಳಿಕೆ ನೀಡಿದ್ದು, “ಸಚಿವ ಎಸ್‌ಟಿ ಸೋಮಶೇಖರ್ ಅವರು ರವಿಯನ್ನು ತಿಳಿದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ, ಆದರೆ ಈಗ ವಾಸ್ತವ ಹೊರಬಂದಿದೆ ಮತ್ತು ರವಿ ಯಾರೆಂದು ನನಗೆ ತಿಳಿದಿಲ್ಲ, ಆದರೆ ಈಗ ಏನು ವಿವರಣೆ ನೀಡುತ್ತೀರಿ, ಇನ್ನಾದರೂ ಸತ್ಯ ಹೊರಬರುತ್ತದೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಯನ್ನು, ಸಿಎಂ ಬೊಮ್ಮಾಯಿಯವರನ್ನು ಕೇಳಿದೆ ,
ಸಿಎಂ ಮನೆಗೆ ಹಲವರು ಭೇಟಿ ನೀಡುತ್ತಿರುತ್ತಾರೆ. ಇಲ್ಲಿಗೆ ಬರುವವರು ಸಿಎಂ ಹಾಗೂ ಕುಟುಂಬದವರ ಜೊತೆ ಫೋಟೋ ತೆಗೆಸಿಕೊಂಡು ಹೋಗುವುದು ಸಾಮಾನ್ಯ. ‘ಸ್ಯಾಂಟ್ರೋ ರವಿ” ಫೋಟೋ ತೆಗೆದಿರಬಹುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಥವಾ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ. ಇವೆಲ್ಲವೂ ವಿರೋಧ ಪಕ್ಷಗಳ ಕಾರ್ಖಾನೆಗಳಲ್ಲಿ ತಯಾರಾದ ಸುಳ್ಳು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇನ್ನೂ ಸಿಎಂ ಬಸವರಾಜ ಬೊಮ್ಮಾಯಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ. ಪ್ರತಿಪಕ್ಷಗಳ ವ್ಯಾಪಕ ಟೀಕಾ ಪ್ರಹಾರದ ಹಿನ್ನಲೆ ಕ್ರಿಮಿನಲ್ ಹಿನ್ನೆಲೆಯುಳ್ಳ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥನನ್ನು ಬಂಧಿಸಿ ಕಳೆದ 20 ವರ್ಷಗಳಲ್ಲಿ ಆತನ ಮೇಲಿರುವ ಎಲ್ಲ ಕೇಸ್‌ಗಳು ಹಾಗೂ ಆತನಿಗಿರುವ ರಾಜಕಾರಣಿಗಳ ಸಂಪರ್ಕದ ಬಗ್ಗೆ ಸಮಗ್ರ ತನಿಖೆ ನಡೆಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.