ಚಿತ್ರದುರ್ಗ: ಬಿಹಾರದ ‘ಇಂಡಿಯಾ’ ಮೈತ್ರಿ ಸರ್ಕಾರ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ತೀವ್ರಗೊಂಡಿವೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಾತಿ ಗಣತಿಗೆ ಸಂಬಂಧಿಸಿದಂತೆ ವರದಿಯನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಿದ್ದು, ಇದನ್ನು ಅರೆಬೆಂದ ವರದಿ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ವರದಿಯನ್ನು ಸಿದ್ಧಪಡಿಸಲಾಯಿತು. ಹವಾ ನಿಯಂತ್ರಿತ ಕೊಠಡಿಯಲ್ಲೇ ಕುಳಿತು ಸಿದ್ಧಪಡಿಸಲಾದ ಈ ವರದಿಗೆ ಸರ್ಕಾರದಿಂದ ಸುಮಾರು 150 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಐಎಎಸ್ ಅಧಿಕಾರಿಗಳು ರಾಜಕೀಯ ಹಿತಾಸಕ್ತಿಯ ಪರ ಕೆಲ್ಸ ಮಾಡ್ಬಾರ್ದು: ಸಚಿವ ಮಹದೇವಪ್ಪ
ಕಾಂತರಾಜ್ ಜಾತಿ ಗಣತಿ ವರದಿಯನ್ನು ಸಿಎಂ ಸಿದ್ಧರಾಮಯ್ಯ ಅವರು ಅವರಿಗೆ ಬೇಕಾದ ರೀತಿಯಲ್ಲಿ ಬರೆಸಿಕೊಂಡಿದ್ದಾರೆ. ಈ ಹಿಂದೆಯೂ ವೀರಶೈವ-ಲಿಂಗಾಯತ ಎಂದು ಸಮುದಾಯಗಳ ನಡುವೆ ತಂದಿಡುವ ಕೆಲಸ ಮಾಡಿದರು. ಈಗ ಕಾಂತರಾಜ್ ವರದಿಯ ಮೂಲಕ ಅದೇ ಕೆಲಸವನ್ನು ಮಾಡಲು ಹೊರಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನ ಇದಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್. ರಾಜ್ಯ್ದಲ್ಲಿ ಯಾವ ಯೋಜನೆಯನ್ನು ಕೂಡ ಸರಿಯಾಗಿ ಅನುಷ್ಠಾನಕ್ಕೆ ತಂದಿಲ್ಲ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ.
ಇದನ್ನೂ ಓದಿ: ಡಾ.ಯತೀಂದ್ರ ವಿಡಿಯೋ ವೈರಲ್ ವಿಚಾರ: ‘AI ಟೆಕ್ನಾಲಜಿ ಬಂದಿದೆ ಏನ್ ಬೇಕಾದ್ರು ಆಗಬಹುದು’
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.