ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಲು ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಆದೇಶಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ನೀರು ಬಿಡದಂತೆ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುತ್ತೇನೆ. ನಮ್ಮಲ್ಲೇ ರೈತರಿಗೆ ನೀರಿಲ್ಲ, ಕುಡಿಯಲೂ ನೀರಿಲ್ಲ. ಇಂಥಹ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು. ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ವಾದ ಮುಂದುವರೆಸಲಿ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನೀರು ಬಿಡಬಾರದು, ಸರ್ಕಾರದ ಜತೆಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ರೈತರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದರು. ಆದರೆ, ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನವೂ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಕರ್ನಾಟಕಕ್ಕೆ ಹಿನ್ನಡೆ; ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಬಿಡಲು ಸೂಚನೆ!
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಅಂತಿಮವಾಗಿ ತಮಿಳುನಾಡಿಗೆ ನೀರು ಬಿಡುವಂತೆ ಸಮಿತಿ ಆದೇಶಿಸಿದ್ದು, ರೈತರು ಸಿಡಿದೆದ್ದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.