ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿರುವ ನಡುವೆ ಕಾಂಗ್ರೆಸ್‌ಗೆ ಶಾಕ್ ಕೊಡಲು ಬಿಜೆಪಿ ಮುಂದಾಗಿದೆ. ನಾಳೆ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆಗೆ ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ 100 ದಿನಗಳಲ್ಲಿ ಆದ 100 ವೈಫಲ್ಯಗಳನ್ನು ಚಾರ್ಜ್ ಶೀಟ್ ಮೂಲಕ ಜನತೆ ಮುಂದಿಡಲು ನಿರ್ಧರಿಸಿದೆ.
ನಾಳೆ ಖಾಸಗಿ ಹೋಟೆಲ್‌ನಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಕಟೀಲ್ ನೇತೃತ್ವದಲ್ಲಿ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದು 100 ದಿನಗಳಲ್ಲಿ ಆದ ಯಡವಟ್ಟುಗಳು, ಸುಳ್ಳು ಹೇಳಿಕೆಗಳು ಒಳಗೊಂಡ ಜಾರ್ಜ್ ಶೀಟ್ ಜನರ ಮುಂದಿಡಲಿದೆ. ಈ ಮೂಲಕ ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಜನತೆಗೆ ವಿವರಿಸಲು ಮುಂದಾಗಿದೆ.
ಇದನ್ನೂ ಓದಿ: ‘ಆಪರೇಷನ್ ಕಾಂಗ್ರೆಸ್ ಹೆಸರಲ್ಲಿ ಶಾಸಕರನ್ನು ಬೆದರಿಸುತ್ತಿದ್ದಾರೆ’
ಇದಕ್ಕೂ ಮೊದಲು ಜನವರಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾರ್ಜ್ ಶೀಟ್ ಬಿಡುಗಡೆ ಮಾಡಿತ್ತು. ಬಳಿಕ ದೆಹಲಿ ಬಿಜೆಪಿ ಆಪ್ ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಬಿಡುಗಡೆ ಮಾಡಿ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಭಾರೀ ಆರೋಪ ಮಾಡಲಾಗಿತ್ತು.
ಆಗಸ್ಟ್ 19 ರಂದು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಚಾರ್ಜ್ ಶೀಟ್ ಬಿಡುಗಡೆ ಮಾಡಿತ್ತು, ಇದು ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಈ ಚಾರ್ಜ್ ಶೀಟ್‌ನಲ್ಲಿ ಹತ್ತಾರು ಯೋಜನೆಗಳು ಅಕ್ರಮ ಎಂದು ಆರೋಪಿಸಲಾಗಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.