ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿ ಕಾವೇರಿ ರಕ್ಷಣಾ ಯಾತ್ರೆ ನಡೆಸಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ, ಡಿಎಂಕೆಯನ್ನು ಮೆಚ್ಚಿಸಲು ಮತ್ತು INDIA ಮೈತ್ರಿಕೂಟಣವನ್ನು ಬಲಪಡಿಸಲು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿದೆ ಎಂದರು.
ಸರ್ಕಾರ ರಾಜ್ಯದ ಹಿತ ಬಲಿ ಕೊಟ್ಟು ತಮಿಳುನಾಡಿಗೆ ನೀರು ಬಿಟ್ಟಿದೆ. ಈ ಸರ್ಕಾರ ರಾಜ್ಯದ ನೀರಿನ ಹಕ್ಕು ರಕ್ಷಣೆ ಮಾಡಿಲ್ಲ. ನೀರಿನ ಹಕ್ಕು ರಕ್ಷಣೆ ಮಾಡುವ ಬದ್ಧತೆ, ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ರಾಜ್ಯದ ವಾಸ್ತವಾಂಶ ಇಡಲಿ. ಕಾವೇರಿ ನೀರಿನ ವಿಚಾರದಲ್ಲಿ ವಿವರಣೆ ನೀಡಿ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: 2,454 ಪೊಲೀಸರ ನೇಮಕಕ್ಕೆ ಸಿಎಂ ಗ್ರೀನ್ ಸಿಗ್ನಲ್!
ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಬೊಮ್ಮಾಯಿ
ನೀರಿಲ್ಲದೆ ರೈತರ ಬೆಳೆ ನಾಶವಾಗಿದೆ. ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಕೊಡಬೇಕು ಎಂದು ಆಗ್ರಹಿಸುತ್ತೇನೆ. ಕಾವೇರಿ ನೀರು ಹಂಚಿಕೆ ಸಂಬಂಧ ಕೋರ್ಟ್‌ನಲ್ಲಿ ಗಂಭೀರವಾಗಿ ವಾದ ಮಾಡಬೇಕು. ಸೀನಿಯರ್ ಲಾಯರ್ ಎಲ್ಲರೂ ಡಿಕೆಶಿಗೆ ಗೊತ್ತು. ಅವರು ಲಾಯರ್ ವಿಚಾರದಲ್ಲಿ ನಿಪುಣರಿದ್ದಾರೆ. ಒಳ್ಳೆಯ ವಕೀಲರನ್ನು ನೇಮಿಸಿ ಎಂದು ಸಲಹೆ ಕೊಡುತ್ತೇನೆ. ಯಾವುದೇ ಕಾರಣಕ್ಕೂ ನೀರನ್ನು ಬಿಡಬಾರದು, ನೀರು ಬಿಟ್ಟರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.