ಬೆಂಗಳೂರು: ಬಿಜೆಪಿ ಜೊತೆಗಿನ ಮೈತ್ರಿ ಫಿಕ್ಸ್ ಎಂದು ಮೈತ್ರಿ ಚರ್ಚೆಯ ಊಹಾಪೋಹಗಳಿಗೆ ಜೆಡಿಎಸ್ ತೆರೆ ಎಳೆದಿದೆ. ರಾಜ್ಯದಲ್ಲಿ ನವಯುವ ಪ್ರಾರಂಭ ಎಂದು ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರಿಂದ ಘೋಷಣೆ ಮಾಡ್ತೇವೆ, ಕ್ಷೇತ್ರಗಳ ಹಂಚಿಕೆ ಮತ್ತು ಮೈತ್ರಿ ಅಧಿಕೃತ ಘೋಷಣೆ ಬಗ್ಗೆ ಸೆ.22 ರ ನಂತರ ತಿಳಿಸ್ತೇವೆ ಎಂದು ತಿಳಿಸಿದರು.
ಜೊತೆಗೆ ಇಂದಿನ ಸಮಾವೇಶದ ಮೂಲಕ ಜೆಡಿಎಸ್ ಕಾರ್ಯಕರ್ತರಿಗೆ ವರಿಷ್ಠರು ಸಂದೇಶ ರವಾನಿಸಿದ್ದು, ವೀಲ್‌ಚೇರ್‌ನಲ್ಲಿ ರಾಜ್ಯ ಪ್ರವಾಸ ಮಾಡುವುದಾಗಿ ಹೆಚ್ ಡಿ ದೇವೇಗೌಡ ಘೋಷಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿಗಳಾದ ಹೆಚ್.ಡಿ ದೇವೇಗೌಡ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಹಾಲಿ ಹಾಗೂ ಮಾಜಿ ಶಾಸಕರು ಸಂಸದರು ಭಾಗಿಯಾಗಿದ್ದರು. ಜೆಡಿಎಸ್, ಬಿಜೆಪಿ ಮೈತ್ರಿ ಬಗ್ಗೆ ಕರೆದಿರುವ ಮಹತ್ವದ ಸಭೆ ಇದಾಗಿದ್ದು, ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.