ನವದೆಹಲಿ: ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಅಂತಿಮಗೊಳಿಸಲಿದ್ದು, ದಿಲ್ಲಿಯಲ್ಲಿ ಪ್ರಧಾನಿ ಮೋದಿ, ಅಮಿತ್, ನಡ್ಡಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಇಂದು ಆಡಳಿತಾರೂಢ ಬಿಜೆಪಿ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಲಿದೆ. ದಿಲ್ಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂತಿಮ ಪಟ್ಟಿ ಸಿದ್ಧವಾಗಲಿದೆ.
ರಾಜ್ಯ ಬಿಜೆಪಿಯ ಕೋರ್ ಕಮಿಟಿ ಪ್ರತಿ ವಿಧಾನಸಭಾ ಸ್ಥಾನಕ್ಕೆ ಮೂವರು ಸ್ಪರ್ಧಾಕಾಂಕ್ಷಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದೆ. ಅದನ್ನು ಕೇಂದ್ರ ಚುನಾವಣಾ ಸಮಿತಿಯ ಮುಂದೆ ಇಡಲಾಗುವುದು. ಕೇಂದ್ರ ಚುನಾವಣಾ ಸಮಿತಿಯಲ್ಲಿ ಅಭ್ಯರ್ಥಿಯ ಅಂತಿಮ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140 ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿಯು ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.