ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಇಂದು ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಭೆ ನಡೆಯಲಿದೆ.
ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಸಭೆ ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊಂದಿರುವ ಬಿ.ಕೆ ಹರಿಪ್ರಸಾದ್, ತಮ್ಮ ಸಮುದಾಯದ ಜನರನ್ನು ಒಗ್ಗೂಡಿಸಿ ಶಕ್ತಿ ಪ್ರದರ್ಶನ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ : ಶೀಘ್ರವೇ ಕ್ರೈಸ್ತ ನಿಗಮ ಸ್ಥಾಪನೆ, ಅಧ್ಯಕ್ಷರ ನೇಮಕ: ಸಿಎಂ
ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಹರಿಪ್ರಸಾದ್, ಈ ಹಿಂದೆ ಹಲವು ವೇದಿಕೆಗಳಲ್ಲಿ ಪರೋಕ್ಷವಾಗಿಯೇ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಜುಲೈ ೨೨ರಂದು ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಸಿಎಂ ವಿರುದ್ಧಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.