Thursday, June 8, 2023
spot_img
- Advertisement -spot_img

ಶೆಟ್ಟರ್ ಕಾಂಗ್ರೆಸ್ ಬಂದ್ರೆ ಸ್ವಾಗತಿಸ್ತೇವೆ : ಬಿ.ಕೆ ಹರಿಪ್ರಸಾದ್

ಕೋಲಾರ: ಮಾಜಿ ಸಿಎಂ ಜಗದೀಶ್ ಶೆಟ್ಟರ್​ ನಮ್ಮ ಪಕ್ಷಕ್ಕೆ ಬಂದರೆ ಶಕ್ತಿ ಬರುತ್ತೆ ಎಂದು ವಿಪಕ್ಷ ನಾಯಕ ಹರಿಪ್ರಸಾದ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ನ್ನು ಕಾಂಗ್ರೆಸ್ ಬಂದ್ರೆ ಪ್ರೀತಿಯಿಂದ ಸ್ವಾಗತಿಸ್ತೇವೆ ಎಂದರು. ‘ಬಿಜೆಪಿಯಲ್ಲಿ ಇರುವವರು ಅಂಧ ಭಕ್ತರು, ಡೋಂಗಿಗಳು ಎಂದು ಅವರಿಗೆ ಗೊತ್ತಾಗಿದೆ, ಬಿಜೆಪಿಯಲ್ಲಿ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದು, ಶಿರಸಿಯಲ್ಲಿ ಸ್ಪೀಕರ್ ಕಾಗೇರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ರಾತ್ರಿ ಜಗದೀಶ್ ಶೆಟ್ಟರ್ ಅವರ​ ಮನವೊಲಿಸುವ ಪ್ರಯತ್ನವನ್ನು ಮಾಡಿದ್ದರು. ಆದರೆ ಇದಕ್ಕೆ ಸಮ್ಮತಿ ನೀಡದ ಶೆಟ್ಟರ್‌ ಕೊನೆಗೂ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.

Related Articles

- Advertisement -spot_img

Latest Articles