ಬೆಂಗಳೂರು : ಐಟಿ ಅಂದರೆ ಬಿಜೆಪಿಯವರ ಇಂಟಲಿಜೆಂಟ್ ಡಿಪಾರ್ಟ್‌ಮೆಂಟ್ ಆಗಿ ಚಿಲುಮೆ ರೀತಿ ಕೆಲಸ ಮಾಡುತ್ತಿದೆ. ಸಿಬಿಐ ಬಿಜೆಪಿ ವಿರೋಧಿಗಳ ವಿರುದ್ಧ ದೊಡ್ಡ ಅಸ್ತ್ರ ಇಟ್ಟುಕೊಂಡು ಬಾಯಿ ಬಿಡಿಸಲು ಪ್ರಯತ್ನ ಮಾಡುತ್ತಿದೆ. ಆದರೆ ನಾವು ಭಯ ಪಡಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿಕೆ ಹರಿ ಪ್ರಸಾದ್ ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮೇಲೆ ಸಿಬಿಐ ದಾಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಡಿ ಅಂದ್ರೆ ಬಿಜೆಪಿ ಎಲೆಕ್ಷನ್ ಡಿಪಾರ್ಟ್ಮೆಂಟ್, ಐಟಿ ಅಂದ್ರೆ ಇಂಟಲಿಜೆನ್ಸ್ ಡಿಪಾರ್ಟ್ಮೆಂಟ್ ಹಾಗೂ ಸಿಬಿಐ ಬಿಜೆಪಿ ಮುಂಚೂಣಿ ಘಟಕವಾಗಿದೆ ಎಂದರು.
ಸಾವರ್ಕರ್ ಫೋಟೋ ವಿವಾದದ ವಿಚಾರವಾಗಿ ಕಾಂಗ್ರೆಸ್ ಮುಖಂಡರ ನಡುವಿನ ಗೊಂದಲ ಕುರಿತಾಗಿ ಮಾತನಾಡಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಹುಳಿ ಹಿಂಡುವ ಕೆಲಸ ಆಗಬಾರದು. ಸರ್ಕಾರ ತೀರ್ಮಾನ ಕೈಗೊಂಡಾಗ ನಾವು ಕತ್ತಿನ ಪಟ್ಟಿ ಹಿಡಿಯಲು ಆಗಲ್ಲ. ನಾವು ನಾಗಪುರ ಯುನಿವರ್ಸಿಟಿಯವರಲ್ಲ. ನಾವು ಜನಸಾಮಾನ್ಯರ ವಿವಿಯವರು ಎಂದರು.
ನಮ್ಮಲ್ಲಿ ದ್ವಂದ್ವ ಇಲ್ಲ, ಸಾವರ್ಕರ್ ವಿಚಾರವಾಗಿ, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬೇರೆ ಬೇರೆ ರೀತಿಯಲ್ಲಿ ವಿರೋಧ ಮಾಡುತ್ತಾರೆ. ನಮ್ಮಲ್ಲಿ ಮತ ಭೇಧ ಇರುತ್ತೆ ಇರಬೇಕು ಎಂದರು.