ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಲಿಂಗಾಯತ ಸಮುದಾಯವನ್ನು ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಲ್ ಸಂತೋಷ್ ಲಿಂಗಾಯತ ಸಮುದಾಯದ ವಿರುದ್ಧ ಇದ್ದಾರೆ. ಈ ಕಾರಣಕ್ಕಾಗಿಯೇ ಬಿಜೆಪಿಯ ಲಿಂಗಾಯತ ನಾಯಕರು ಸಂತೋಷ್ ವಿರುದ್ಧ ಅಸಮಾಧಾನ ಹೊಂದಿದ್ದಾರೆ. ಹಲವು ಲಿಂಗಾಯತ ನಾಯಕರೇ ಈ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರಗಳನ್ನು ಮುಚ್ಚಿಡಲು ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದರು.
ಇದನ್ನೂ ಓದಿ : ಕರಾವಳಿಯಲ್ಲಿ ಬಿಜೆಪಿಗೆ ಬಿಗ್ ಶಾಕ್! ‘ಕೈ’ ಹಿಡಿದ ಸುಕುಮಾರ್ ಶೆಟ್ಟಿ
ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಗುಮಾನಿಯ ಬಗ್ಗೆ ಪ್ರತಿಕ್ರಿಯಿಸಿದ ಆರ್.ಬಿ ತಿಮ್ಮಾಪುರ, ಹಲವು ಜನರು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬರ್ತಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿದ್ದೇನೆ. ಬಿಜೆಪಿಯಿಂದ ಬರೋದು ಖಂಡಿತಾ, ಬಂದೆ ಬರ್ತಾರೆ. ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ, ನಾಯಕತ್ವದ ಕೊರತೆ ಇದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಡಳಿತ ವೈಫಲ್ಯದ ಆರೋಪ ಹೊರಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.