ರಾಮನಗರ : ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ ಮಾಡಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕಪ್ಪುಪಟ್ಟಿ ಪ್ರದರ್ಶಿಸಲಾಗಿದೆ.
ಬಿಜೆಪಿ ಮುಖಂಡ ಎಸ್.ಆರ್.ನಾಗರಾಜ್ ಕಪ್ಪುಪಟ್ಟಿ ಪ್ರದರ್ಶನ ಮಾಡಿದ್ದು, ರಾಮನಗರದ ನಗರದ ಎಂ.ಜಿ.ರಸ್ತೆಯಲ್ಲಿ ಐಕ್ಯತಾ ಪಾದಯಾತ್ರೆ ವೇಳೆ ಈ ಘಟನೆ ನಡೆದಿದೆ.
ಮೆಡಿಕಲ್ ಕಾಲೇಜು ವಿಚಾರವಾಗಿ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶಿಸಲಾಗಿದೆ. ಈ ವೇಳೆ ಪೊಲೀಸರು ಸ್ಥಳದಲ್ಲಿದ್ದು, ಕಪ್ಪು ಪಟ್ಟಿ ಪ್ರದರ್ಶನ್ಕೆ ತಡೆ ಮಾಡಿದ್ದಾರೆ.
ಸಿಎಂ, ಡಿಸಿಎಂಗೆ ಕಪ್ಪುಪಟ್ಟಿ ಪ್ರದರ್ಶನ ಮಾಡುತ್ತಿದ್ದಂತೆ ತಕ್ಷಣ ಕಾರ್ಯ ಪ್ರವೃತ್ತರಾದ ಸ್ಥಳದಲ್ಲಿದ್ದ ಪೊಲೀಸರು ಬಿಜೆಪಿ ಮುಖಂಡ ಎಸ್.ಆರ್.ನಾಗರಾಜ್ ಅವರನ್ನು ತಡೆದು ವಶಕ್ಕೆ ಪಡೆದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.