ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದ್ದು, ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಕೊರೋನಾ ರೂಪಾಂತರಿ ತಳಿ BF.7 ಆತಂಕ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ಗಳ ಕಂಡಕ್ಟರ್, ಡ್ರೈವರ್, ಪ್ರಯಾಣಿಕರಿಗೂ ಮಾಸ್ಕ್ ಕಡ್ಡಾಯ ಮಾಡಿದೆ. ಈ ಸಂಬಂಧ ಶೀಘ್ರವೇ ಬಿಎಂಟಿಸಿ ಗೈಡ್ಲೈನ್ಸ್ ಬಿಡುಗಡೆ ಮಾಡಲಿದೆ. ನಾಳೆಯಿಂದ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸಬೇಕಾದರೆ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
ಒಂದು ವೇಳೆ ಮಾಸ್ಕ್ ಹಾಕದಿದ್ರೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶವಿಲ್ಲಈ ಬಗ್ಗೆ ಸಂಚಾರ ನಿಯಂತ್ರಕರು ಮೆಜೆಸ್ಟಿಕ್, ಬಿಎಂಟಿಸಿ ಬಸ್ ಡ್ರೈವರ್, ಕಂಡಕ್ಟರ್ ಗಳಿಗೂ ಗೈಡ್ಲೈನ್ಸ್ ನೀಡುತ್ತಿದ್ದು, ಮಾಸ್ಕ್ ಧರಿಸುವಂತೆ ಹೇಳುತ್ತಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂಚಾರ ನಿಯಂತ್ರಕರು, ಇಂದು ಮೊದಲನೇ ದಿನವಾದ್ದರಿಂದ ಎಲ್ಲರಿಗೂ ಸೂಚನೆ ನೀಡಿದ್ದೇವೆ. ನಾಳೆ ಬೆಳಗ್ಗೆ ಮಾಸ್ಕ್ ಹಾಕಿಲ್ಲ ಅಂದ್ರೆ ಗಾಡಿಯೊಳಗೆ(ಬಸ್) ಪ್ರವೇಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ಆದೇಶದಂತೆ ಬಸ್‍ಗೆ ಬರುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಸ್ ಹತ್ತುವವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಜೊತೆಗೆ ಬಿಎಂಟಿಸಿ ಸಿಬ್ಬಂದಿಗಳಿಗೂ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.