Friday, September 29, 2023
spot_img
- Advertisement -spot_img

ಬಂದ್‌ಗೆ ಸೆಡ್ಡು ಹೊಡೆದ ಬಿಎಂಟಿಸಿ : ಹೆಚ್ಚುವರಿ ಬಸ್‌ ರಸ್ತೆಗಿಳಿಸಲು ನಿರ್ಧಾರ

ಬೆಂಗಳೂರು : ನಾಳೆ ವಿವಿಧ ಖಾಸಗಿ ಸಾರಿಗೆಗಳ ಒಕ್ಕೂಟಗಳು ನಗರ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಿದ ಹೆಚ್ಚುವರಿ ಬಸ್‌ಗಳು ರಸ್ತೆಗಿಳಿಯಲಿವೆ ಎಂದು ಇಲಾಖೆಯು ತಿಳಿಸಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಾರಿಗೆ ಇಲಾಖೆ, ಬೆಂಗಳೂರು ನಗರ ಹಾಗೂ ಹೊರವಲಯದ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯಲ್ಲಿ ಹೆಚ್ಚುವರಿ ಬಸ್‌ಗಳನ್ನುಇ ಬಿಡಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸ್ವಾಗತಿಸುತ್ತೇನೆ : ಸುನೀಲ್ ಕುಮಾರ್

ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ಖಾಸಗಿ ಆಟೋ, ಟ್ಯಾಕ್ಸಿ ಮತ್ತು ವಾಹನಗಳ ಚಾಲಕರ ಒಕ್ಕೂಟವು ತಮ್ಮ ವಿವಿಧ ಬೇಡಿಕಗಳ ಈಡೇರಿಕೆಗಾಗಿ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸಂಸ್ಥೆಯು, ಬೆಂಗಳೂರಿನ ಶಾಲಾ/ಕಾಲೇಜು ಮಕ್ಕಳು ಹಾಗೂ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ನಗರದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಕೃಷ್ಣರಾಜ ಮಾರುಕಟ್ಟೆ ಹಾಗೂ ಶಿವಾಜಿನಗರ ಬಸ್ ನಿಲ್ದಾಣಗಳಿಂದ ಕಾಡುಗೋಡಿ, ಸರ್ಜಾಪುರ, ಅತ್ತಿಬೆಲೆ, ಆನೇಕಲ್, ಬನ್ನೇರುಘಟ್ಟ/ಜಿಗಣಿ, ಹಾರೋಹಳ್ಳಿ, ಬಿಡದಿ, ತಾವರೆಕೆರೆ, ನೆಲಮಂಗಲ, ಹೆಸರಘಟ್ಟ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬಾಗಲೂರು, ಚನ್ನಸಂದ್ರ, ಹೊಸಕೋಟೆ ಸೇರಿದಂತೆ ರಿಂಗ್ ರೋಡ್‌ಗಳಲ್ಲಿ ಮತ್ತು ನಗರದ ಪ್ರಮುಖ ಸ್ಥಳಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ 500 ರಿಂದ ಸುಮಾರು 4000 ಹೆಚ್ಚುವರಿ ಬಸ್‌ಗಳನ್ನು ಓಡಾಡುವಂತೆ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ನಗರದ ಪ್ರಮುಖ ರಸ್ತೆ, ಬಸ್ ನಿಲ್ದಾಣ ಹಾಗೂ ಜಂಕ್ಷನ್‌ಗಳಲ್ಲಿ ಸಂಸ್ಥೆಯ ಅಧಿಕಾರಿ ಅಥವಾ ಸಿಬ್ಬಂದಿಗಳನ್ನು ಹಾಗೂ ಸಾರಥಿ ಗಸ್ತು ಪಡೆಗಳನ್ನು ನಿಯೋಜಿಸಿ, ಸಂಸ್ಥೆಯ ಸಾರಿಗೆಗಳ ಮೇಲ್ವಿಚಾರಣೆ ಮಾಡಿಸಲಾಗುತ್ತದೆ. ಅಲ್ಲದೇ ಪ್ರಯಾಣಿಕರ ಅಧಿಕ ದಟ್ಟಣೆ ಕಂಡುಬಂದ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು. ಪ್ರಯಾಣಿಕರು ಇದರ ಲಾಭ ಪಡೆದುಕೊಳ್ಳಲು ಬಿಎಂಟಿಸಿ ಮನವಿ ಮಾಡಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles