ಬೆಂಗಳೂರು: ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಬಳಿಕ ಈ ಸ್ಥಾನ ತೆರವಾಗಿತ್ತು. ಚುನಾವಣೆಯ ತಯಾರಿಯಲ್ಲಿರುವ ಕಾಂಗ್ರೆಸ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಎನ್. ಚಂದ್ರಪ್ಪರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿ ಮಾಡುವಂತೆ ಎಐಸಿಸಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಸಮಯದಲ್ಲಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಮಾರ್ಚ್ ತಿಂಗಳಿನಲ್ಲಿ ನಿಧನ ಹೊಂದಿದ್ದರು.