Monday, March 27, 2023
spot_img
- Advertisement -spot_img

ರಾಜಾಜಿನಗರದ ಎನ್‌ಪಿಎಸ್ ಶಾಲೆಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಮೇಲ್

ಬೆಂಗಳೂರು: ಬೆಂಗಳೂರು ನಗರದ ರಾಜಾಜಿನಗರದ ಎನ್‌ಪಿಎಸ್ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳಿಸಲಾಗಿದೆ.

ಪೊಲೀಸರು, ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಧಾವಿಸಿದ್ದು,ಪರಿಶೀಲನೆ ನಡೆಸಲಾಗುತ್ತಿದೆ.”ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಪಿಎಸ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆಯಲ್ಲಿ ತೊಡಗಿದೆ. ಪೋಷಕರು, ಮಕ್ಕಳು ಆತಂಕಪಡಬೇಕಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಇದು ಹುಸಿ ಇ-ಮೇಲ್ ಆಗಿರಲೂಬಹುದು. ಆದರೆ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಬಾಂಬ್ ಬೆದರಿಕೆ ಬಂದಿದ್ದರಿಂದ ಡಾಗ್ ಸ್ಕ್ವಾಡ್ ಹಾಗೂ ಬಾಂಬ್ ನಿಷ್ಕ್ರಿಯ ದಳದ ಜೊತೆ ತಕ್ಷಣ ಪೊಲೀಸರು ಶಾಲೆಗೆ ತೆರಳಿದ್ದು, ಮಕ್ಕಳನ್ನ ಶಾಲೆಯಿಂದ‌ ಹೊರಗೆ ಕಳುಹಿಸಿದ್ದಾರೆ.

Related Articles

- Advertisement -

Latest Articles