ಹುಬ್ಬಳ್ಳಿ: ಎಂಇಎಸ್ ಪುಂಡಾಟ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದು ಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ. ಆ ಕೆಲಸವನ್ನು ನಾವು ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಮಾಧ್ಯಮದರೊಂದಿಗೆ ಮಾತನಾಡಿ, ಮಹಾಮೇಳಾವ್ ಏರ್ಪಡಿಸಿರುವ ಎಂ ಇಎಸ್ ಪುಡರು ಅನಾವಶ್ಯಕವಾಗಿ ಗಡಿ ವಿವಾದದಲ್ಲಿ ತೊಡಗಿಸಿಕೊಂಡಿರುವುದರ ಬಗ್ಗೆ ಸಿಎಂ ಕಿಡಿಕಾರಿದ್ದಾರೆ.
ಡಿ.ಕೆ ಶಿವಕುಮಾರ್ ಕುಕ್ಕರ್ ಬಾಂಬ್ ವಿಚಾರ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಜವಾಬ್ದಾರಿ ಸ್ಥಾನದಲ್ಲಿ ಇದ್ದು, ಮೊದಲು ಕೆಪಿಸಿಸಿ ಅಧ್ಯಕ್ಷರ ಹೇಳಿಕೆಯನ್ನು ಗಮನಿಸಿ ಪ್ರತಿಕ್ರಿಯೆ ನೀಡಬೇಕು. ಅದೊಂದು ಆಕಸ್ಮಿಕ ಘಟನೆ, ಪ್ರೆಶರ್ ಕುಕ್ಕರ್‌ನಿಂದ ಆಗಿದ್ದು ಅಂತ ಹೇಳಿದ್ದಾರೆ. ಶಿವಕುಮಾರ್ ಹೇಳಿದ ಮಾತು ಕೇಳಿಸಿಕೊಂಡು ಮಾತನಾಡಲಿ ಎಂದು ತಿರುಗೇಟು ನೀಡಿದರು.