Monday, December 11, 2023
spot_img
- Advertisement -spot_img

ಮಂತ್ರಾಲಯಕ್ಕೆ ಭೇಟಿ ನೀಡಿದ ‘ಬ್ರಿಟನ್ ಪ್ರಧಾನಿ ರಿಷಿ ಸುನಾಕ್’ ಪೋಷಕರು

ರಾಯಚೂರು : ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ತಂದೆ ತಾಯಿ ಹಾಗೂ ಅತ್ತೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಇಂದು ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಕಲಬುರಗಿ ಎಂಪಿ ಟಿಕೆಟ್ ಬೇಡಿಕೆ ಇಟ್ಟ ಜೆಡಿಎಸ್ ಕಾರ್ಯಾಧ್ಯಕ್ಷ

ಶ್ರೀ ರಾಘವೇಂದ್ರ ಸ್ವಾಮಿಗಳ‌ ದರ್ಶನ ಪಡೆದ ರಿಷಿ ಸುನಕ್ ತಂದೆ ಯಶ್ವೀರ್‌‌ ಸುನಕ್, ತಾಯಿ ಉಷಾ ಸುನಕ್ ಹಾಗೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು, ರಾಯರ ದರ್ಶನದ ನಂತರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು.

ಇದನ್ನೂ ಓದಿ : ಪೊಲೀಸರು ವಶಕ್ಕೆ ಪಡೆಯುವ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಚೈತ್ರಾ ಕುಂದಾಪುರ!

ಈ ಹಿಂದೆ ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ಸಭೆಯ ಬಿಡುವಿನ ವೇಳೆಯಲ್ಲಿ ದೆಹಲಿಯಲ್ಲಿರುವ ದೇಗುಲ ಅಕ್ಷರಧಾಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಈಗ ಬ್ರಿಟನ್ ಪ್ರಧಾನಿಯ ತಂದೆ ತಾಯಿ ಹಾಗೂ ಅತ್ತೆ ಸುಧಾಮೂರ್ತಿಯವರು ರಾಜ್ಯದ ಪ್ರಸಿದ್ಧ ದೇವಾಲಯ ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ಕೊಟ್ಟಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles