ಬೆಂಗಳೂರು: ಟಿಕೆಟ್ ನೀಡಲೂ ನಾವು ರೆಡಿ ಇದ್ದರೂ ಬಾಬುರಾವ್ ಚಿಂಚನಸೂರ್ ಬಿಜೆಪಿ ಬಿಟ್ಟು ಹೋಗಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ನೀಡುವುದು ಸೇರಿದಂತೆ ನಾವು ಎಲ್ಲದಕ್ಕೂ ಸಿದ್ಧ ಇದ್ದೆವು. ಆದರೂ ಹೋದರು. ಆಗಿದ್ದು ಆಯ್ತು ಈಗ ಬಿಟ್ಟು ಹೋಗಿದ್ದಾರೆ. ಈಗ ಯಾಕೆ ಚರ್ಚೆ? ಎಂದರು.
ನಾವು ಹೋದ ಕಡೆಯಲ್ಲೆಲ್ಲ ದೊಡ್ಡ ಪ್ರಮಾಣದಲ್ಲಿ ಜನ ಬೆಂಬಲ ಸಿಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ನಿಶ್ಚಿತವಾಗಿ 140 ಸ್ಥಾನ ಗೆದ್ದು ಮತ್ತೆ ಸರ್ಕಾರ ರಚನೆ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರಂತಹವರ ನಾಯಕತ್ವ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿ ಮೇಲೆ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲಿದೆ ಎಂದರು.
ಅಧಿಕಾರಕ್ಕೆ ಬರಲ್ಲ ಅಂದಾಗ ಜನರಲ್ಲಿ ಗೊಂದಲ ಉಂಟು ಮಾಡಲು ಈ ರೀತಿಯ ಸುಳ್ಳು ಭರವಸೆ ಕೊಡುತ್ತಾರೆ. ಇಂತಹ ಭರವಸೆಗಳಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ.ಅವರಿಗೆ ಬಿಜೆಪಿ ಮೇಲೆ ತುಂಬ ಭಯ ಇದೆ ಎಂದು ಟಾಂಗ್ ನೀಡಿದರು. ಅಂದಹಾಗೆ ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಆಯೋಜನೆ ಮಾಡಿರುವ ರೋಡ್ ಶೋ, ವಿಜಯ ಸಂಕಲ್ಪ ಯಾತ್ರೆ ಹಾಗು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.