ಕೋಲಾರ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆಯಲ್ಲಿರುವ ಶ್ರೀವಿನಾಯಕ ದೇಗುಲಕ್ಕೆ ನಾಳೆ ಭೇಟಿ ನೀಡಲಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಪಕ್ಷವನ್ನು ಬಲಗೊಳಿಸಲು ಬಿಎಸ್‌ವೈ ಸಜ್ಜಾಗಿದ್ದು, ಈ ಹಿನ್ನೆಲೆ ಕುರುಡುಮಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಯಡಿಯೂರಪ್ಪ ಅವರು ಇಲ್ಲಿಂದಲೇ ಲೋಕಸಭೆ ಚುನಾವಣಾ ಪ್ರಚಾರ ಶುರು ಮಾಡಲಿದ್ದಾರೆ.
ಯಡಿಯೂರಪ್ಪ ಅವರೊಂದಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ್ಯ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಬಿಜೆಪಿ ಹಲವು ನಾಯಕರು ನಾಳೆ ಕುರುಡುಮಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಸಚಿವರಿಂದ ನನಗೆ ಜೀವ ಬೆದರಿಕೆ ಇದೆ: ಪ್ರಣವಾನಂದ ಸ್ವಾಮೀಜಿ ಆರೋಪ
ಕುರುಡುಮಲೆಯ ವಿನಾಯಕ ದೇವಸ್ಥಾನವು ರಾಜಕೀಯವಾಗಿ ಹೆಚ್ಚು ಪ್ರಸಿದ್ಧಿ ಪಡೆದುಕೊಂಡಿರುವ ಸ್ಥಳವಾಗಿದ್ದು, ವಿವಿಧ ಪಕ್ಷಗಳ ಪ್ರಮುಖ ರಾಜಕೀಯ ನಾಯಕರು ತಮ್ಮ ಪ್ರಮುಖ ಕಾರ್ಯಕ್ರಮಗಳನ್ನು ಈ ಸ್ಥಳದಿಂದಲೇ ಚಾಲನೆ ನೀಡುವ ವಾಡಿಕೆಯೂ ಇದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.