ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಇಂದು ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಮತ್ತು ಪುತ್ರ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಮೂತ್ರ ಸೋಂಕು, ಜ್ವರದಿಂದ ಬಳಲುತ್ತಿದ್ದ ದೇವೇಗೌಡರನ್ನು ಮೊನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದು ಸದ್ಯಕ್ಕೆ ಆಸ್ಪತ್ರೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಇಂದು ಅವರನ್ನು ಭೇಟಿ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಜೊತೆಯಾಗಿ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಇದಕ್ಕೆ ಮೊದಲು ಸಾಕಷ್ಟು ಗಣ್ಯರು ದೇವೇಗೌಡರನ್ನು ಭೇಟಿ ಮಾಡಿ ಹೋಗಿದ್ದಾರೆ. ನಿನ್ನೆ ಪುತ್ರ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದರು. ಅಲ್ಲದೆ ನಿರ್ಮಲಾನಂದ ಸ್ವಾಮೀಜಿಗಳೂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ದೇವೇಗೌಡರು ಸಾಕಷ್ಟು ಸುಧಾರಿಸಿದ್ದಾರೆ ಎಂದು ತಿಳಿದುಬಂದಿದೆ.