ಪೋಕ್ಸೋ ಕೇಸ್‌, ಕೋರ್ಟ್‌ಗೆ ಹಾಜರಾಗುವಂತೆ ಮಾಜಿ ಸಿಎಂ ಬಿಎಸ್‌ವೈಗೆ ಸಮನ್ಸ್‌ ಜಾರಿ

ಬೆಂಗಳೂರು : ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪೋಕ್ಸೋ ಕೇಸ್‌ನ ವಿಚಾರಣೆ ಆರಂಭ ಮಾಡಿರುವ ಟ್ರಯಲ್‌ ಕೋರ್ಟ್‌ ಯಡಿಯೂರಪ್ಪಗೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರಣೆ ಮಾಡುತ್ತಿರುವ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅವರಿಗೆ ಸಮನ್ಸ್‌ ಜಾರಿ ಮಾಡಿದೆ.

ಯಡಿಯೂರಪ್ಪ ಮಾತ್ರವಲ್ಲದೆ, ಅರುಣ, ಮರಿಸ್ವಾಮಿ ಹಾಗೂ ರುದ್ರೇಶ್‌ಗೂ ಸಮನ್ಸ್‌ ಜಾರಿ ಮಾಡಲಾಗಿದ್ದು, ಡಿಸೆಂಬರ್‌ 2 ರಂದು ಕೋರ್ಟ್‌ಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಟ್ರಯಲ್ ಆರಂಭ ಹಿನ್ನಲೆ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಪ್ರಕರಣದ ಆರೋಪಿಗಳಿಗೆ ಸಮನ್ಸ್ ಜಾರಿಗೆ ಎಸ್‌ಪಿಪಿ ಅಶೋಕ್‌ ನಾಯ್ಕ್‌ ಮನವಿ ಮಾಡಿದ್ದರು.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಕಳೆದ ಗುರುವಾರ ಹಿನ್ನಡೆ ನೀಡಿತ್ತು. ವಿಚಾರಣಾಧೀನ ನ್ಯಾಯಾಲಯವು ಪ್ರಕರಣದ ಸಂಜ್ಞೆ ಪರಿಗಣಿಸಿ, ಸಮನ್ಸ್ ಜಾರಿಗೊಳಿಸಿರುವುದನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದೆ. ಇದರ ಪರಿಣಾಮವಾಗಿ, ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಯನ್ನು ಎದುರಿಸುವುದು ಅನಿವಾರ್ಯವಾಗಿದೆ.

ಈ ಹಿನ್ನೆಲೆ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿಐಡಿ ತನಿಖೆ ಮುಂದುವರೆಯಲಿದೆ. ಆದರೆ, ವಿಚಾರಣಾ ನ್ಯಾಯಾಲಯದ ಮುಂದೆ ಯಡಿಯೂರಪ್ಪ ಅವರ ಹಾಜರಾತಿ ಅಗತ್ಯವಿಲ್ಲದಿದ್ದರೆ, ಅವರ ಪರ ವಕೀಲರು ಸಲ್ಲಿಸುವ ವಿನಾಯಿತಿ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

Leave a Reply

Your email address will not be published. Required fields are marked *