ಬೆಂಗಳೂರು: ಸುದೀಪ್ ವಿಚಾರದಲ್ಲಿ ಕಾಂಗ್ರೆಸ್‌ನವ್ರು ತಲೆ ಕೆಟ್ಟು ಟೀಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಚಲನಚಿತ್ರದಲ್ಲಿ ಫೇಮಸ್ ಆಗಿರುವಂತಹ ವ್ಯಕ್ತಿ ಬಿಜೆಪಿಗೆ ಸಪೋರ್ಟ್ ಮಾಡುತ್ತೇನೆ ಅಂತ ಹೇಳಿದ್ದಾರೆ, ಇದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿಯವರಿಗೆ ಬೆಂಬಲ ಸಿಗುತ್ತಿರುವುದನ್ನು ಕಾಂಗ್ರೆಸ್‌ಗೆ ಸಹಿಸೋಕೆ ಆಗುತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಖಾಸಗಿ ತಾರಾ ಹೋಟೆಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್,” ನಾನು ಬಿಜೆಪಿ ಸೇರುತ್ತಿಲ್ಲ, ಚುನಾವಣೆಗೂ ನಿಲ್ಲುತ್ತಿಲ್ಲ, ಕಷ್ಟದಲ್ಲಿ ನನ್ನ ಪರವಾಗಿ ನಿಂತಿದ್ದ ಬೊಮ್ಮಾಯಿ ಪರವಾಗಿ ನಿಲ್ಲುತ್ತಿದ್ದೇನೆ. ನಾನು ಇಂದು ಒಂದು ಪಕ್ಷದ ಪರ ಇಲ್ಲ. ಕೇವಲ ಬೊಮ್ಮಾಯಿ ಎನ್ನುವ ವ್ಯಕ್ತಿ ಪರ ಅಷ್ಟೇ. ಇದು ರಾಜಕೀಯಕ್ಕಲ್ಲ. ವೈಯಕ್ತಿಕವಾಗಿ ಅವರ ಬೆಂಬಲಕ್ಕೆ ಇದ್ದೇನೆ ಎಂದು ಸ್ಪಷ್ಟಪಡಿಸಿದ್ದರು.
ಏಪ್ರಿಲ್ 8 ರಂದು ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ನಂತರ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.